ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2 ಕೋಟಿ 16 ಸಾವಿರ ರೂ. ಸಂಗ್ರಹವಾಗಿದೆ.
Advertisement
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
Advertisement
Advertisement
ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಭಕ್ತರು ಆಗಮಿಸಿದ್ದರು. ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ ನಗದು, 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
Advertisement
ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ: ಜೊಮ್ಯಾಟೊಗೆ ಶಾಕ್ – ಲೇಟ್ ಮಾಡಿ ಆರ್ಡರ್ ಕ್ಯಾನ್ಸಲ್ ಆದ್ರೆ ದಂಡದ ಜೊತೆ ಊಟನೂ ಫ್ರೀ ಕೊಡ್ಬೇಕು