ಬೆಂಗಳೂರು: ಪದವಿ ಮುಗಿದ ನಂತರ ಯಾವ ಕಾಲೇಜಿನಲ್ಲಿ ಯಾವ ಕೋರ್ಸ್ ಇದೆ..? ಈ ಕೋರ್ಸ್‍ಗಳಿಗೆ ಎಷ್ಟು ಖರ್ಚಾಗುತ್ತೆ ..? ಈ ಕಾಲೇಜುಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ..? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿ ಪ್ರಸ್ತುತಿ ವಿದ್ಯಾಮಂದಿರದಲ್ಲಿ ಉತ್ತರ ಕಂಡುಕೊಳ್ಳಿ.
Advertisement
ನಿಮ್ಮ ನೆಚ್ಚಿನ ಪಬ್ಲಿಕ್ ಟಿವಿ (Public Tv) ಪ್ರಸ್ತುತ ಪಡಿಸುತ್ತಿರುವ ವಿದ್ಯಾಮಂದಿರ (VidyaMandira) ಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ವಿದ್ಯಾಮಂದಿರ 2022 ಮೆಗಾ ಸ್ನಾತಕೋತ್ತರ ಶೈಕ್ಷಣಿಕ ಉತ್ಸವ ನಡೆಯಲಿದೆ.
Advertisement
Advertisement
ಈ ಹಿಂದೆ ಎಸ್‍ಎಸ್‍ಎಲ್‍ಸಿ (SSLC), ಪಿಯುಸಿ (PUC) ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ `ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಈ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಮೇಳ (Education Expo) ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇಂದು ಮತ್ತು ನಾಳೆ ವಿದ್ಯಾ ಮಂದಿರ ನಡೆಯುಲಿದೆ.
Advertisement
ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ 36ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳು ಭಾಗವಹಿಸುತ್ತಿವೆ. ಡಿಗ್ರಿ ನಂತ್ರ ಏನ್ ಮಾಡಬೇಕು, ಯಾವ ಕೋರ್ಸ್, ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬಹುದು ಹೀಗೆ ಹಲವು ಅನುಮಾನಗಳಿಗೆ ಪೋಷಕರು, ವಿದ್ಯಾರ್ಥಿಗಳು ಇಲ್ಲಿ ಉತ್ತರ ಕಂಡುಕೊಳ್ಳಬಹುದಾಗಿದೆ.
ವಿದ್ಯಾಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥ್‍ನಾರಾಯಣ್, ಬಿಜಿಎಸ್ ಸಂಸ್ಥೆ ಎಂಡಿ ಪ್ರಕಾಶನಾಥ ಸ್ವಾಮೀಜಿ, ರೇವಾ ವಿವಿ ಪ್ರೋ-ಚಾನ್ಸಲರ್ ಉಮೇಶ್ ಎಸ್ ರಾಜು, ಪ್ರೋ ವಿಸಿ ವಿದ್ಯಾಶಂಕರ ಶೆಟ್ಟಿ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಡಿಕೆ ಮೋಹನ್ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ವಿದ್ಯಾಮಂದಿರದಲ್ಲಿ ಹಲವು ವಿಚಾರಗಳ ಬಗ್ಗೆ ವಿಷಯ ತಜ್ಞರಿಂದ ವಿಶೇಷ ಸೆಮಿನಾರ್ ಇರುತ್ತೆ. ಹಾಗೆಯೇ ಶೈಕ್ಷಣಿಕ ಮೇಳಕ್ಕೆ ಬಂದವರಿಗೆ ಆಪ್‍ಕೆ ಇವಿ ಸಂಸ್ಥೆಯ ಎಲೆಕ್ಟ್ರಿಕ್ ಬೈಕ್ ಸೇರಿ ಹಲವು ಬಂಪರ್ ಬಹುಮಾನಗಳು ಇದೆ. ಹೀಗಾಗಿ ತಪ್ಪದೇ ವಿದ್ಯಾಮಂದಿರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.. ಬಹುಮಾನ ಗೆಲ್ಲಿ.. ವಿದ್ಯಾಮಂದಿರವನ್ನ ಸದುಪಯೋಗಪಡಿಸಿಕೊಳ್ಳಿ.