ಬೆಂಗಳೂರು: ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂದು ರಜೆ ಘೋಷಿಸಲಾಗಿದೆ ಎಂದು ಶಶಿಕುಮಾರ್ ತಿಳಸಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಶಿಕುಮಾರ್ ಅವರು, ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಾವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲು ತಿರ್ಮಾನಿಸಿದ್ದೇವೆ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಾಳೆ, ನಾಡಿದ್ದು ಎರಡು ದಿನಗಳು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಇನ್ನೂ ಸರ್ಕಾರಿ ಶಾಲೆಗಳಿಗೆ ಭಾರತ್ ಮುಷ್ಕರ ಹಿನ್ನೆಲೆ ರಜೆ ಘೋಷಣೆ ಮಾಡಿಲ್ಲ. ಆದ್ರೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡಲು ಜಿಲ್ಲೆಯಲ್ಲಿ ನಡೆಯುವ ಮುಷ್ಕರದ ಪರಿಸ್ಥಿತಿ ಅನುಗುಣವಾಗಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv