ಬೆಂಗಳೂರು: ಕಳೆದ ಮಂಗಳವಾರದಂದು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಇದೀಗ ಮತ್ತೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೋಮವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತಯಾಚನೆ ಮಾಡುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತ-ಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Advertisement
ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ. ಸೆಕ್ಷನ್ 144 ಸೆಕ್ಷನ್ ಅಡಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಯಾಗಿದೆ.
Advertisement
Advertisement
ಮಂಗಳವಾರದಂದು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿತೇಶ್ ಅಪಾರ್ಟ್‍ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಇಬ್ಬರಿಗಾಗಿ ನಡುರಸ್ತೆಯಲ್ಲಿ ಸಂಜೆ ಭಾರೀ ಹೈಡ್ರಾಮವೇ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಮಂಗಳವಾರ ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ನಗರದ ಎಲ್ಲ ಬಾರ್, ಪಬ್ ಬಂದ್ ಆಗಿರುತ್ತದೆ ಎಂದು ತಿಳಿಸಿದ್ದರು. ಆದರೆ ಬುಧವಾರ ಮಧ್ಯಾಹ್ನ ನಿಷೇಧಾಜ್ಞೆಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು.