ಪಾಟ್ನಾ: 14 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು (Boat Capsizes) ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಇಬ್ಬರು ಸಾವನ್ಬನಪ್ಪಿದ್ದು, 5 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ(Patna) ನಡೆದಿದೆ.
ಪ್ರವಾಹ ಪೀಡಿತ ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಬಳಿ ಗಂಗಾ ನದಿಯಲ್ಲಿ (Ganga River) ನೀರಿನ ಮಟ್ಟ ಏರಿಕೆ ಹಾಗೂ ಬಲವಾದ ಗಾಳಿಯಿಂದ ದೋಣಿ ಮುಳುಗಿದೆ. ಕೂಡಲೇ ಸ್ಥಳೀಯರ ನೆರವಿನಿಂದ ದೋಣಿಯಲ್ಲಿದ್ದ 7 ಮಂದಿಯನ್ನು ಎಸ್‌ಡಿಆರ್‌ಎಫ್ ತಂಡ ಸುರಕ್ಷಿತವಾಗಿ ರಕ್ಷಿಸಿದ್ದು, ಇಬ್ಬರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ದೋಣಿಯಲ್ಲಿ ಕರೆದೊಯ್ದಿದ್ದು, ಯಾವುದೇ ರಕ್ಷಣಾ ಕವಚಗಳನ್ನು ಹೊಂದಿರದ ಕಾರಣ ದುರಂತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ
ಮೃತರನ್ನು ನೀಲಂ ಕುಮಾರಿ (30) ಹಾಗೂ ಕಾಶಿ ಕುಮಾರ್ (15) ಎಂದು ಗುರುತಿಸಲಾಗಿದೆ. 14 ಮಂದಿ ಪೈಕಿ ಐದು ಮಂದಿ ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರಿದಿದೆ. ಪ್ರತಿಕೂಲ ಹವಾಮಾನ ಮತ್ತು ನೀರಿನ ಪರಿಸ್ಥಿತಿಗಳ ಮಧ್ಯೆಯೂ ಮುಳುಗು ತಜ್ಞ ಮತ್ತು ರಕ್ಷಣಾ ಸಿಬ್ಬಂದಿ ನದಿಯ ವಿವಿಧ ಭಾಗಗಳಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿ| ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
