ಬಳ್ಳಾರಿ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 10 ಜನರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕು ಹಾರುವನಳ್ಳಿ ಬಳಿ ನಡೆದಿದೆ.
ಯರ್ರಿಸ್ವಾಮಿ(35) ಹಾಗೂ ರೇಣುಕಮ್ಮ(38) ಮೃತ ದುರ್ದೈವಿಗಳು. ನರೇಗಾ ಕೆಲಸಕ್ಕೆ ಕೂಲಿ ಕಾರ್ಮಿಕರು ಟ್ರ್ಯಾಕ್ಟರ್ ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಗೊಲ್ಲರಹಳ್ಳಿ, ಬಸವನದುರ್ಗ ಕೆರೆಗೆ ಚಿಲಕರಹಟ್ಟಿ ಗ್ರಾಮದಿಂದ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 10 ಮಂದಿಯನ್ನು ಹೊಸಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.