ದಾವಣಗೆರೆ: ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಸಮೀಪದಲ್ಲಿ ನಡೆದಿದೆ.
ಬೈಕ್ ಸವಾರರಾದ ನಾಗರಾಜ್ (45) ಮತ್ತು ಯಲ್ಲಪ್ಪ (53) ಮೃತ ದುರ್ದೈವಿಗಳು. ದಾವಣಗೆರೆಯ ಮಲ್ಲಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಾಗರಾಜ್ ಮತ್ತು ಯಲ್ಲಪ್ಪ ಇಬ್ಬರೂ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಓಡಿಸುತ್ತಿದ್ದ ನಾಗರಾಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಯಲ್ಲಪ್ಪ ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೆÇಲೀಸರು ಭೇಟಿ ನೀಡಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.