ರಾಮನಗರ: ದಶಪಥ ಹೆದ್ದಾರಿಯಲ್ಲಿ(10-lane Mysuru-Bengaluru Highway) ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ(Accident) ಸಂಭವಿಸಿ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ.
ತಿರುಪತಿಯಿಂದ ಮರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಚಲಿಸುತ್ತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: RCB ಗ್ರ್ಯಾಂಡ್ ಎಂಟ್ರಿ ಕೊಟ್ಟ ಸಿಂಧನೂರಿನ ಮನೋಜ್ ಭಾಂಡಗೆ
Advertisement
Advertisement
ಅಪಘಾತದ ರಭಸಕ್ಕೆ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಮಹೇಶ್, ಕೃಷ್ಣ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿದ್ದಾರೆ.
Advertisement
ನಿದ್ದೆಯ ಮಂಪರಿನಲ್ಲಿ ಚಾಲಕ ವೇಗವಾಗಿ ಟಿಟಿ ಚಲಾಯಿಸಿ ಕ್ಯಾಂಟರ್‌ಗೆ ಗುದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.