ಚಿಕ್ಕಬಳ್ಳಾಪುರ: ಕ್ಯಾಂಟರ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಬಳಿ ನಡೆದಿದೆ.
ಸ್ಕಾರ್ಪಿಯೋದಲ್ಲಿದ್ದ ನವಶಾದ್ (28) ಮತ್ತು ಮನ್ಸೂರು (30) ಮೃತ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಸ್ಕಾರ್ಪಿಯೋಗೆ ಎದುರುಗಡೆಯಿಂದ ಬಂದ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ವಾಹನ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಂಟರ್ ಚಾಲಕ ಹಾಗೂ ಸ್ಕಾರ್ಪಿಯೋದಲ್ಲಿದ್ದ ಮತ್ತೊಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಆಂಧ್ರಪ್ರದೇಶದ ರಾಚೋಟಿ ಜಿಲ್ಲೆಯರವರೆಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv