ಹಾಸನ: ವಿದ್ಯುತ್ ಶಾಕ್‍ನಿಂದ ಎರಡು ಕಾಡಾನೆಗಳು (Elephant) ಸಾವನ್ನಪ್ಪಿದ ಘಟನೆ ಸಕಲೇಶಪುರ (Sakleshpura) ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಬಳಿಯ ಎಬಿಸಿ ಎಸ್ಟೇಟ್‍ನಲ್ಲಿ ನಡೆದಿದೆ.
ಆಹಾರ ಅರಸಿ, ಮರಿಯೊಂದಿಗೆ ಕಾಡಾನೆ ಕಾಫಿ ತೋಟಕ್ಕೆ ಬಂದಿತ್ತು. ಈ ವೇಳೆ, ಕಾಫಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದು, ತಂತಿಯನ್ನು ತುಳಿದು ಸಾವನ್ನಪ್ಪಿವೆ ಎನ್ನಲಾಗಿದೆ. ಇದನ್ನೂ ಓದಿ: Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು