ಹಾಸನ: ಹಸುಗಳಿಗೆ ನೀರು ಕುಡಿಸಲು ತೆರಳಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ಭಾನುವಾರ ನಡೆದಿದೆ.
ದಡದಹಳ್ಳಿ ನಿವಾಸಿಗಳಾದ ಸುರೇಶ್ (45) ಹಾಗೂ ಪ್ರಸನ್ನ (23) ಮೃತ ದುರ್ದೈವಿಗಳು. ಭಾನುವಾರ ಮಧ್ಯಾಹ್ನ ಹಸುಗಳಿಗೆ ನೀರು ಕುಡಿಸಲು ಸುರೇಶ್ ಹಾಗೂ ಪ್ರಸನ್ನ ಕೆರೆಗೆ ತೆರಳಿದ್ದರು.
- Advertisement
ಹಸುಗಳಿಗೆ ನೀರು ಕುಡಿಸುತ್ತಿದ್ದಾಗ ಸುರೇಶ್ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ. ತಕ್ಷಣ ರಕ್ಷಣೆಗೆಂದು ನೀರಿಗೆ ಹರಿದ ಪ್ರಸನ್ನ ಕೂಡ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಪ್ರಸನ್ನ ಮೃತದೇಹ ಪತ್ತೆಯಾಗಿದ್ದು, ಸುರೇಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
- Advertisement
ಈ ಘಟನೆ ಕುರಿತು ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews