ಕಲಬುರಗಿ: ದಶಕಗಳಿಂದ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸೋ ಸಮಯ ಬಂದಿದ್ದು, ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳು ಪ್ರಾಯೋಗಿಕ ಹಾರಾಟ ನಡೆಸಲಿದೆ
ಕಲಬುರಗಿ ಸೇರಿದಂತೆ ಹೈದ್ರಾಬಾದ್ ಕರ್ನಾಟಕ ಜನರ ಹಲವು ದಶಕಗಳ ಕನಸು ಇಂದು ನನಸಾಗುತ್ತಿದೆ. ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ನಡೆಯಲಿದೆ. ಬೆಳಗ್ಗೆ 10.30 ರಿಂದ 11 ಗಂಟೆಯೊಳಗೆ ಹೈದ್ರಾಬಾದ್‍ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡೈಮಂಡ್ ಡಿಎ 40 ಹಾಗೂ ಡೈಮಂಡ್ ಡಿಎ 42 ಹೆಸರಿನ ಎರಡು ವಿಮಾನಗಳು ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಾಯೋಗಿಕ ಹಾರಾಟ ನಡೆಸಲಿವೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Advertisement
Advertisement
2008ರಲ್ಲಿ ಪ್ರಾರಂಭವಾದ ವಿಮಾನ ನಿಲ್ದಾಣ ಕಾಮಗಾರಿ ಇಂದಿಗೂ ಮುಗಿಯದಿರೋದಕ್ಕೆ ಕಾರಣ ಸರ್ಕಾರದ ನಿರ್ಲಕ್ಷ್ಯ. ಕಲಬುರಗಿ ಹೊರವಲಯದ ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಬಳಿಯಿರುವ ಈ ವಿಮಾನ ನಿಲ್ದಾಣದ ಕಾಮಗಾರಿಯನ್ನು ಮೊದಲು ಹೈದ್ರಾಬಾದ್ ಮೂಲದ ರಿಜಿನಲ್ ಏರ್ಪೋರ್ಟ್- ಹೋಲ್ಡಿಂಗ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಎನ್ನುವ ಸಂಸ್ಥೆಗೆ ನೀಡಲಾಗಿತ್ತು. ಆದರೆ ಗುತ್ತಿಗೆ ಪಡೆದಿದ್ದ ಸಂಸ್ಥೆ ಕಾಮಗಾರಿಯನ್ನು ಪರಿಪೂರ್ಣವಾಗಿ ಮಾಡಿರಲಿಲ್ಲ. ಇದೀಗ ಖರ್ಗೆ ಅವರೇ ಬೇಗ ಕಾಮಗಾರಿ ಮುಗಿಸಲು ಸೂಚಿಸಿದ್ದರಿಂದ ಇಂದು ಲೋಹದ ಹಕ್ಕಿಗಳು ಹಾರಾಡಲಿವೆ. ಪೂರ್ಣ ಪ್ರಮಾಣದಲ್ಲಿ ವಿಮಾನಗಳು ಹಾರಾಡಲು ಕ್ರಮ ಕೈಗೊಳ್ಳಬೇಕು ಅಂತ ಸಾರ್ವಜನಿಕರು ಆಗ್ರಹಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv