ನವದೆಹಲಿ: ಇಬ್ಬರು ಯುವತಿಯರ ಮೃತ ದೇಹಗಳು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿರುವ ಘಟನೆ ಆಗ್ನೇಯ ದೆಹಲಿಯ ತುಘಲಕಾಬಾದ್ ನಲ್ಲಿ ನಡೆದಿದೆ.
ಈ ಘಟನೆ ಬೆಳಗ್ಗೆ 6 ಗಂಟೆಗೆ ಬೆಳಕಿಗೆ ಬಂದಿದ್ದು, ತುಘಲಕಾಬಾದ್ ನ ರೈಲ್ವೆ ಟ್ರ್ಯಾಕ್ ಗಳಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಯುವತಿಯರು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ರೀತಿಯಲ್ಲಿ ಟ್ರ್ಯಾಕ್ ನಲ್ಲಿ ಬಿದ್ದಿದ್ದರು. ಇವರನ್ನು ಗಮನಿಸಿದ ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಅವರಿಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸ್ ತಂಡವು ಈ ಘಟನೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ಯುವತಿಯರ ಸ್ಥಳದಲ್ಲಿ “Sorry Father” ಎಂದು ಬರೆದಿದ್ದ ಒಂದು ಚೀಟಿ ದೊರೆತಿದೆ. ಮೃತ ಒಬ್ಬ ಹುಡುಗಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ನಂತರ ಆಕೆ ಖಿನ್ನತೆಗೆ ಒಳಗಾಗಿದ್ದಳು. ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು ಪೊಲೀಸರು ಇದು ಆತ್ಮಹತ್ಯೆ ಎಂದು ಶಂಕಿಸಿದ್ದು, ಪೊಲೀಸರು ಎಲ್ಲಾ ರೀತಿಯಲ್ಲೂ ತನಿಖೆ ಮಾಡುತ್ತಿದ್ದಾರೆ. ಈ ಯುವತಿಯರು 12ನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. ಇತ್ತೀಚೆಗೆ ಸಿಬಿಎಸ್‍ಇ ಫಲಿತಾಂಶಗಳ ಕಾರಣದಿಂದ ಈ ರೀತಿ ಮಾಡಿಕೊಂಡಿದ್ದಾರಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.