ಶ್ರೀನಗರ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಕಡೆ ಗ್ರೆನೇಡ್ ದಾಳಿಗಳು ನಡೆದಿವೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ನಾಗರಿಕ ಗಾಯಗೊಂಡಿರುವುದಾಗಿ ವರದಿಯಾಗಿದೆ.
ನಿನ್ನೆ(ಸೋಮವಾರ) ಬುದ್ಗಾಮ್‌ನ ಗೋಪಾಲ್‌ಪೋರಾ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಎಸೆದ ಗ್ರೆನೇಡ್ ಸ್ಥಳೀಯ ಕರಣ್ ಕುಮಾರ್ ಸಿಂಗ್ ಗಾಯಗೊಂಡಿದ್ದರು. ಬಳಿಕ ಶ್ರೀನಗರದ ಕಾಶ್ಮೀರ ಪೊಲೀಸ್ ನಿಯಂತ್ರಣ ಕೊಠಡಿ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬೇರೆ ಬೇರೆ ಸಂದರ್ಭಗಳಲ್ಲಿ ನಡೆದಿರುವ ದಾಳಿಯಲ್ಲಿ ಗಾಯಗೊಂಡಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ
Advertisement
Advertisement
ಭಾನುವಾರವೂ ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಪೊಲೀಸ್ ಕಾನ್‌ಸ್ಟೇಬಲ್ ಸರ್ಫರಾಜ್ ಅಹ್ಮದ್ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ