ಶಿವಮೊಗ್ಗ: ಕಳೆದ ಫೆಬ್ರವರಿ ತಿಂಗಳಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಕೆಂಡದಂತಾಗಿ ಬಳಿಕ ಶಾಂತ ಸ್ಥಿತಿಗೆ ತಲುಪಿದ್ದರೂ ಇದೀಗ ಮತ್ತೆ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳು ಅಲ್ಲಲ್ಲಿ ನಡೆಯುತ್ತಿವೆ. ಕಾರುಗಳ ಮೇಲೆ ಕಲ್ಲು ತೂರಾಟ, ಕಾರುಗಳಿಗೆ ಬೆಂಕಿ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ಆಗ್ಗಾಗ್ಗೆ ನಡೆಯುತ್ತಲೇ ಇವೆ. ಇದೀಗ ಮತ್ತೆ ಅಂತಹುದೇ ಘಟನೆಯೊಂದು ಶಿವಮೊಗ್ಗದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗದಲ್ಲಿ ಮತ್ತೆ ಕೋಮು ಸಂಘರ್ಷ ಎದುರಾಗುತ್ತದೆಯೋ ಎಂಬ ಆತಂಕ ಇದೀಗ ಎದುರಾಗಿದೆ.
Advertisement
ಸೋಮವಾರ ಸಂಜೆ ಹಾಗೂ ರಾತ್ರಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ಇದು ಶಿವಮೊಗ್ಗ ಜನರ ನಿದ್ದೆಗೆಡಿಸಿದೆ. ನಿನ್ನೆ ಸಂಜೆ ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಮುಂಭಾಗದಲ್ಲಿ ಹಿಂದೂ ಯುವತಿಯರನ್ನು, ಅನ್ಯಕೋಮಿನ ಯುವಕರು ಚುಡಾಯಿಸುತ್ತಿದ್ದರು. ಈ ವೇಳೆ ಏಕೆ ಚುಡಾಯಿಸುತ್ತಿರಾ ಎಂದು ಕೇಳಿದ್ದಕ್ಕೆ ಹಿಂದೂ ಯುವಕ ಹರ್ಷನ ಮೇಲೆ ಅನ್ಯಕೋಮಿನ 8 ಯುವಕರು ಹಲ್ಲೆ ನಡೆಸಿದ್ದಾರೆ. ಹರ್ಷ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನಾಗಿದ್ದು, ಪ್ರಕರಣ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: PSI ಹಗರಣದ ಹಿಂದೆ ಬೊಮ್ಮಾಯಿ, ಗೃಹಸಚಿವರಿದ್ದಾರೆ – ಸರ್ಕಾರದ ಕುಮ್ಮಕ್ಕಿಲ್ಲದೇ ಇದೆಲ್ಲಾ ಸಾಧ್ಯವೇ ಎಂದ ಸಿದ್ದರಾಮಯ್ಯ
Advertisement
Advertisement
ಈ ಘಟನೆಯ ಬೆನ್ನಲ್ಲೇ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ, ಮತ್ತೊಂದು ಇಂತಹುದೇ ಘಟನೆ ನಡೆದಿದೆ. ಈ ಪ್ರಕರಣದಲ್ಲಿಯೂ ಕೂಡ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಿಂದೂ ಯುವಕ ಕಾಂತರಾಜ್ ಮೇಲೆ ಸುಯೇಬ್, ಜುನೈದ್ ಸೇರಿದಂತೆ ಇತರ ಮೂವರು ಹಲ್ಲೆ ನಡೆಸಿದ್ದಾರೆ. ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದಾತ ಭಜರಂಗದಳ ಕಾರ್ಯಕರ್ತ ಎಂದು ಹೇಳಲಾಗಿದೆ. ಕಾಂತರಾಜ್ ಮೇಲೆ ಮಚ್ಚು, ಬ್ಯಾಟ್‌ಗಳಿಂದ ಹಲ್ಲೆ ನಡೆಸಲಾಗಿದೆ. ಕೈ, ಕಾಲು, ಬೆನ್ನಿಗೆ ತೀವ್ರವಾದ ಗಾಯಗಳಾಗಿದ್ದು, ಕಾಂತರಾಜ್ ಇದೀಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Advertisement
ಈ ಎರಡೂ ಘಟನೆಗಳ ಸಂಬಂಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಕಾಂತರಾಜ್ ಮೇಲೆ ಹಲ್ಲೆ ನಡೆಸಿರುವ ಇಬ್ಬರನ್ನು ಬಂಧಿಸಲಾಗಿದೆ. ಹರ್ಷನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಎರಡೂ ಪ್ರಕರಣಗಳನ್ನು ಶಿವಮೊಗ್ಗ ಪೊಲೀಸರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಮತ್ತೆ ಘಟನೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ – ಚಾಮರಾಜಪೇಟೆ ಬಂದ್ ಯಶಸ್ವಿ
ಒಟ್ಟಿನಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗದಲ್ಲಿ ಈ ರೀತಿಯ ಘಟನೆಗಳು ಆಗ್ಗಾಗ್ಗೆ ಮರುಕಳಿಸುತ್ತಲೇ ಇದ್ದು, ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದು ಇದೀಗ ಅನಿವಾರ್ಯವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಶಿವಮೊಗ್ಗ ಜಿಲ್ಲೆಯವರೇ ಆಗಿದ್ದು, ಈ ಪ್ರಕರಣಗಳು ರಾಜಕಾರಣಗೊಳ್ಳುವ ಮೊದಲೇ, ಪೊಲೀಸರು ಬಿಗಿ ಕ್ರಮ ತೆಗೆದುಕೊಳ್ಳಬೇಕಿದೆ. ಶಿವಮೊಗ್ಗ ಶಾಂತವಾಗಿ ಇರುವಂತೆ ನೋಡಿಕೊಳ್ಳಬೇಕಿದೆ.