ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗೆ ಭಾರೀ ಗುಂಡಿನ ಚಕಮಕಿ ಮುಂದುವರಿದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದೆ. ಗಾಯಗೊಂಡ ಇಬ್ಬರು ಸೈನಿಕರು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಆಗಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯ ಹತ್ಯೆಯ ಹಿಂದೆ ಉಗ್ರರನ್ನು ಭದ್ರತಾ ಪಡೆಗಳು ಮೂಲೆಗುಂಪು ಮಾಡಿದ ನಂತರ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆಯಿತು. ಇದನ್ನೂ ಓದಿ: ಬಟ್ಟೆ ಅಂಗಡಿಗಳಿಗೆ ಹಣ ನೀಡದೇ ವಂಚನೆ – ಚಾರ್ಟೆರ್ಡ್ ಅಕೌಂಟೆಂಟ್ ಆಗಿದ್ದ ಯುವತಿ ಅರೆಸ್ಟ್
Advertisement
Advertisement
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಶ್ರೀನಗರದ ಜಬರ್ವಾನ್ ಅರಣ್ಯ ಪ್ರದೇಶದಲ್ಲಿ ಜಂಟಿ ಪೊಲೀಸ್ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬುದು ಸುಳ್ಳು ಆರೋಪ: ಡಿಕೆಶಿ
Advertisement
Advertisement
ಶನಿವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿತು. ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ರಾಜಪುರದಲ್ಲಿ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಉಗ್ರರು ಮೇಲೆ ರಕ್ಷಣಾ ಪಡೆಗಳು ಗುಂಡಿನ ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ನಡೆದಿದೆ. ರಾಜಪುರ, ಸೋಪೋರ್, ಬಾರಾಮುಲ್ಲಾ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ