ಲಕ್ನೋ: ಕಾಶ್ಮೀರ ಮೂಲದ ಇಬ್ಬರು ವ್ಯಾಪಾರಿಗಳಿಗೆ ಕೆಲ ಸಾಮಾಜಿಕ ಕಾರ್ಯಕರ್ತರು ನಡುರಸ್ತೆಯಲ್ಲೇ ಥಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಬುಧವಾರ ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಲಕ್ನೋನ ಡಾಲಿಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
Advertisement
Advertisement
2 ಕಾಶ್ಮೀರಿ ವ್ಯಾಪಾರಿಗಳಿಗೆ ದೊಣ್ಣೆ ಹಿಡಿದು ಒಬ್ಬ ವ್ಯಕ್ತಿ ಥಳಿಸುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕೇಸರಿ ಬಣ್ಣದ ಬಟ್ಟೆ ಧರಿಸಿದ್ದ ಗುಂಪೊಂದು ವ್ಯಾಪಾರಿಗಳಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಯಾಕೆ ನಮ್ಮನ್ನು ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನೀವು ಕಾಶ್ಮೀರದವರು ಅದಕ್ಕೆ ನಿಮ್ಮನ್ನು ಹೊಡೆಯುತ್ತಿದ್ದೇವೆ ಅಂತ ಆರೋಪಿಗಳು ಉತ್ತರಿಸಿದ್ದಾರೆ. ಈ ವಿಡಿಯೋ ಆಧಾರದ ಮೇಲೆ ಈಗಾಗಲೇ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
Advertisement
Nothing will do more damage to the idea of India in J&K than videos like these. Keep thrashing Kashmiris like this on the streets at the hands of RSS/Bajrang Dal goons & then try to sell the idea of “atoot ang”, it simply wont fly. https://t.co/MYkuEuDLjj
— Omar Abdullah (@OmarAbdullah) March 7, 2019
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ, ಉಗ್ರರು ಮಾಡಿರುವ ದಾಳಿಗೆ ಅಮಾಯಕರನ್ನು ಸಿಕ್ಷಿಸುವುದು ತಪ್ಪು. ಈ ರೀತಿ ಮಾಡಿ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ. ಸುಮ್ಮನೆ ಅಮಾಯಕರಿಗೆ ತೊಂದರೆ ಕೊಡಬೇಡಿ ಅಂತ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv