– ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆ
– ಪ್ರವಾಹದ ಆತಂಕದಲ್ಲಿ ಗ್ರಾಮಸ್ಥರು
ಕಲಬುರಗಿ: ಮಹಾರಾಷ್ಟ್ರದಲ್ಲಿ (Maharashtra) ವ್ಯಾಪಕ ಮಳೆ (Rain) ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ (Bhima River) 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ದೇವಲ ಗಾಣಗಾಪುರ, ಘತ್ತರಗಿ ಸೇತುವೆ ಹಾಗೂ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆಯಾಗಿದೆ. ಇದನ್ನೂ ಓದಿ: ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್ ಬಾಲಕ!
ಭೀಮಾ ನದಿ ಒಳಹರಿವು ಹೆಚ್ಚುತ್ತಿದ್ದು, ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಅಕ್ಕಪಕ್ಕದ ಊರುಗಳಿಗೆ ನದಿ ನೀರು ನುಗ್ಗುವ ಭೀತಿ ಉಂಟಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರದಿಂದ ಇರುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ

