Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
Last updated: April 29, 2026 4:57 pm
Public TV
Share
4 Min Read
NANDINI GHEE TIRUPATI LADDU
SHARE

– ಹಾಲು ದರ ಏರಿಕೆ ಪ್ರಸ್ತಾವನೆ ಸದ್ಯಕ್ಕಿಲ್ಲ

ಬೆಂಗಳೂರು: ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ಸನ್ನಿಧಾನಕ್ಕೆ (Tirupati) ಬಮುಲ್‌ನಿಂದ ತಿಂಗಳಿಗೆ 2 ಲಕ್ಷ ಕೆಜಿ ತುಪ್ಪವನ್ನು (Nandini Ghee) ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್‌ನಿಂದ (KMF) ತುಪ್ಪ ಸರಬರಾಜು ಮಾಡಲಾಗುತ್ತಿತ್ತು‌ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು‌.

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಕಚೇರಿಯಲ್ಲಿ ಸುರೇಶ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ತಿರುಪತಿಗೆ ತುಪ್ಪ ಪೂರೈಕೆ ವಾಹನಕ್ಕೆ ಬಮುಲ್ ನಿರ್ದೇಶಕರು, ಅಧಿಕಾರಿಗಳ ಜತೆಗೆ ಹಸಿರು ಬಾವುಟ ತೋರಿ ಬೀಳ್ಕೊಟ್ಟರು. ಇದನ್ನೂ ಓದಿ: ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

ತಿರುಪತಿಗೆ ನಂದಿನಿ ತುಪ್ಪ ಪೂರೈಕೆಗೆ ನಾವು ಟೆಂಡರ್ ಪಡೆದಿದ್ದು, ಇದರ ಮೊತ್ತ 136 ಕೋಟಿ ರೂಪಾಯಿ. ನಿತ್ಯ 12.5 ಟನ್‌ನಂತೆ ಮುಂದಿನ ಆರು ತಿಂಗಳು ತುಪ್ಪ ಸರಬರಾಜಾಗಲಿದೆ. ಬಮುಲ್ ಒಕ್ಕೂಟ ಟಿಟಿಡಿ ಜೊತೆ ಪ್ರತ್ಯೇಕವಾಗಿ ಒಪ್ಪಂದ ಮಾಡಿಕೊಂಡು ಈ ಸರಬರಾಜು ಮಾಡುತ್ತಿದೆ. ಗುಣಮಟ್ಟದಲ್ಲಿ ಮತ್ತು ರುಚಿಯಲ್ಲಿ ನಂದಿನಿ ತುಪ್ಪ ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿದೆ ಎಂದರು.

ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ
ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ. ನಾವು ಕೊಟ್ಟ ಪಾಸ್‌ವರ್ಡ್‌ನಲ್ಲಿ ನಮೂದಿಸಿದರೆ ಮಾತ್ರ ತೆರೆಯಬಹುದು. ಗ್ರಾಹಕರಿಗೂ ಸಹ ಇದೇ ರೀತಿ ಗುಣಮಟ್ಟದ ಪದಾರ್ಥ ನೀಡುತ್ತಿದ್ದೇವೆ ಎಂದು ತಿಳಿಸಿದರು.

DK Suresh

ಶ್ರೀ ವೆಂಕಟೇಶ್ವರ ಸ್ವಾಮಿ, ಪದ್ಮಾವತಿ ಅಮ್ಮನವರ ಆಶೀರ್ವಾದ ನಮ್ಮ ನಂದಿನಿಯ ಮೇಲೆ ಇರುವ ಕಾರಣಕ್ಕೆ ಇದು ಸಾಧ್ಯವಾಗಿದೆ. ನಂದಿನಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾರುಕಟ್ಟೆಯಲ್ಲಿ ಅಕ್ರಮ ಎಸಗುತ್ತಿರುವವರ ವಿರುದ್ಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಂತಹವರ ವಿರುದ್ಧ ಒಕ್ಕೂಟದಿಂದ ದೂರುಗಳನ್ನು ನೀಡಲಾಗಿದೆ ಎಂದರು‌.

ಗುಣಮಟ್ಟದ ಇಂತಹ ಉತ್ಪನ್ನಗಳ ಬಗ್ಗೆ ಮಾಧ್ಯಮಗಳು ಹೆಚ್ಚು ಪ್ರಚಾರ ನೀಡಬೇಕು. ಇದರಿಂದ ಕರ್ನಾಟಕದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ನಾವು ಈಗ 1 ಕೋಟಿ ಲೀಟರ್ ಹಾಲಿನ ಸಂಗ್ರಹಣೆ ಮಾಡುತ್ತಿದ್ದೇವೆ. ಮುಂದಿ‌ನ ದಿನಗಳಲ್ಲಿ ವಿಶೇಷ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಬಗ್ಗೆ ಆಲೋಚನೆಯಿದೆ ಎಂದು ಹೇಳಿದರು‌. ಇದನ್ನೂ ಓದಿ: ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

ಕನಕಪುರ ಮೆಗಾ ಡೈರಿ ಪ್ಲಾಂಟ್ ಸತತ ಮೂರನೇ ಬಾರಿಗೆ ಸಿಐಎ ಅವಾರ್ಡ್ ಅನ್ನು ಪಡೆದುಕೊಂಡಿದೆ. ಸ್ವಚ್ಚತೆ, ಗುಣಮಟ್ಟ ಕಾಪಾಡಿದ ಒಕ್ಕೂಟದ ಎಲ್ಲಾ ಸಿಬ್ಬಂದಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಹೆಚ್ಚಿನ ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟ ಉತ್ಪನ್ನಗಳನ್ನು ಜನರಿಗೆ ನೀಡಬೇಕು. ನಿರ್ದೇಶಕರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ದರ ಏರಿಕೆ ಪ್ರಸ್ತಾವನೆ ಸದ್ಯಕ್ಕಿಲ್ಲ
ದರ ಏರಿಕೆ ವಿಚಾರವಾಗಿ ಕೇಳಿದಾಗ, ಸದ್ಯಕ್ಕೆ ದರ ಏರಿಕೆ ಪ್ರಸ್ತಾವನೆಗಳು ಇಲ್ಲ‌. ಹಾಲಿನ ದರ ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಅಧ್ಯಯನ ಮಾಡಲಾಗುವುದು. ನಮ್ಮಲ್ಲೇ ಒಂದಷ್ಟು ಲೋಪಗಳಿವೆ. ಅದನ್ನು ಸರಿಪಡಿಸಲು ಸರ್ಕಾರದ ಮುಂದೆ ಅನುಮತಿ ಕೇಳುತ್ತೇವೆ. ಉತ್ಪನ್ನಗಳ ಪ್ಯಾಕಿಂಗ್ ಸಲಕರಣೆಗಳ ಖರೀದಿ ವೆಚ್ಚ ಹೆಚ್ಚಳವಾಗುತ್ತಿದೆ. ಉದಾಹರಣಗೆ ಪ್ಲಾಸ್ಟಿಕ್ ಕ್ರೇಟ್, ಪ್ಯಾಕಿಂಗ್ ಕವರ್. ಅಲ್ಲದೇ ಶುದ್ಧೀಕರಣ ರಾಸಾಯನಿಕಗಳನ್ನು ವಿದೇಶದಿಂದಲೇ ತರಿಸಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ಕೆಎಂಎಫ್ ಜೊತೆ ಮಾತನಾಡಿ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ಚಿಂತನೆ ಮಾಡುತ್ತೇವೆ. ಖಾಸಗಿಯವರು ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದ್ದಾರೆ‌. ನಾವು ಸರ್ಕಾರದ ಅಧೀನದಲ್ಲಿ ಇರುವ ಕಾರಣಕ್ಕೆ ಇದನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ನಾವು ಗುಣಮಟ್ಟದ ಪದಾರ್ಥ ನೀಡಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

Tirupati Laddu

ಮಾರುಕಟ್ಟೆಯಲ್ಲಿ ಅರ್ಧ ಲೀಟರ್ ಹಾಲಿಗೆ ಬೇಡಿಕೆಯಿದೆ. ಅದರ ಬೆಲೆ ಹೆಚ್ಚಿದೆ. ಒಂದು ಲೀಟರ್ ಹಾಲಿನ ಬೆಲೆ ಕಡಿಮೆಯಿದೆ. ಹೊರೆ ಅನ್ನುವುದಿಲ್ಲ‌. ಏಕೆಂದರೆ ಒಂದೊಂದು ಒಕ್ಕೂಟದಲ್ಲಿ ಒಂದೊಂದು ಹಾಲಿನ ದರವಿದೆ. ಅಲ್ಲದೇ, ಮಳೆಗಾಲ ಬಂದ ತಕ್ಷಣ 10-15 ಲಕ್ಷ‌ ಲೀಟರ್ ಹಾಲಿನ ಸರಬರಾಜು ಹೆಚ್ಚಾಗಲಿದೆ. ಕಳೆದ ವರ್ಷ ರಾಜ್ಯದಲ್ಲಿ 1.5 ಕೋಟಿ ಲೀಟರ್ ಹಾಲು ಬರುತ್ತಿತ್ತು. ಬಮುಲ್‌ನಿಂದ 14 ಲಕ್ಷ ಲೀಟರ್ ಹಾಲನ್ನು ತೆಗೆದುಕೊಳ್ಳುತ್ತಿದ್ದೇವೆ. ಬೇಸಿಗೆಯಲ್ಲಿ 17.5 ಲಕ್ಷ ಲೀಟರ್ ಹಾಲು ಬರುತ್ತಿದೆ. ನಮ್ಮ ಗುರಿ 21 ಲಕ್ಷ ಲೀಟರ್ ಹಾಲು. ನಾವು ಹಾಲಿಗಿಂತ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗುತ್ತಿದ್ದೇವೆ ಎಂದರು.

ಬಮುಲ್‌ನಿಂದ ತುಪ್ಪವನ್ನ ಏಕೆ ಸರಬರಾಜು ಮಾಡಲಾಗುತ್ತಿದೆ ಎಂದು ಕೇಳಿದಾಗ, ಸಂಗ್ರಹಣೆ ಮುಖ್ಯವಾದುದು. ಇದಕ್ಕೆ ನಾವು ಕಳೆದ 6 ತಿಂಗಳಿನಿಂದ ತಯಾರಿ ಮಾಡಿಕೊಂಡಿದ್ದೆವು. ನಮ್ಮಲ್ಲಿ ಸರಬರಾಜು ಶಕ್ತಿ ಇಲ್ಲದೇ ಹೋದರೆ ಟೆಂಡರ್ ಪಡೆದ ಮೇಲೆ ಕಷ್ಟ ಪಡಬೇಕಾಗುತ್ತದೆ. ಅದಕ್ಕೆ ಸಿದ್ಧತೆ ಮಾಡಿಕೊಂಡು ನಾವು ಟೆಂಡರ್ ಪಡೆದೆವು ಎಂದು ವಿವರಿಸಿದರು.

ದಿನ 20 ಲಕ್ಷ ಲೀಟರ್ ಹಾಲು ಸಂಗ್ರಹ ಗುರಿ
ಬಮುಲ್‌ನಲ್ಲಿ ನಿತ್ಯ 17.5 ಲಕ್ಷ ಲೀಟರ್ ಹಾಲನ್ನು ಶೇಖರಣೆ ಮಾಡಲಾಗುತ್ತಿದೆ. ಈ ವರ್ಷದ ನಮ್ಮ ಗುರಿ 20-21 ಲಕ್ಷ ಲೀಟರ್‌. ಹಾಲಿನ ಹೆಚ್ಚಳಕ್ಕೆ ಉತ್ಪಾದನಾ ಸಂಘಗಳಲ್ಲಿ ವಿಶೇಷ ತರಬೇತಿ ನೀಡಲಾಗುತ್ತಿದೆ. ಹೆಚ್ಚಿನ ಹೆಣ್ಣು ಕರುಗಳೇ ಆಗಬೇಕು ಎಂದು ಕಳೆದ ಜನವರಿಯಿಂದ ಕಾರ್ಯಕ್ರಮ ರೂಪಿಸಿ ಪ್ರತಿಹಂತದಲ್ಲಿಯೂ ಮೂರು ಲಕ್ಷ ಸೆಮನ್ಸ್ ಖರೀದಿ ಮಾಡಿ ರಾಸುಗಳಿಗೆ ಹಾಕಲಾಗುತ್ತಿದೆ. ಹಸುಗಳ ಬೆಳವಣಿಗೆ, ಆರೋಗ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಗಮನಿಸಲು ತಂಡ ನೇಮಿಸಲಾಗಿದೆ. ಗುಣಮಟ್ಟವನ್ನ ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಹಾಲಿನ ಉತ್ಪನ್ನಗಳ ಗುಣಮಟ್ಟ ಹೇಗಿರಬೇಕು ಎಂದು ಆ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ದೇಸಿ ತಳಿ ಹಾಲು, ಕೊಬ್ಬು ರಹಿತ, ಲ್ಯಾಕ್ಟೋಸ್ ಫ್ರೀ, ಪ್ರೋಬಯಾಟಿಕ್ ಮೊಸರು ಹೀಗೆ ಅನೇಕ ಉತ್ಪನ್ನಗಳ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಮಾರುಕಟ್ಟೆಗೆ ಅನುಗುಣವಾಗಿ ನಾವು ನೀಡಬೇಕಿದೆ. ಇದರ ಬಗ್ಗೆ ಒಂದಷ್ಟು ಸಂಶೋಧನೆ ಕೂಡ ನಡೆಸುತ್ತಿದ್ದೇವೆ ಎಂದರು.

TAGGED:D.K.Sureshnandini gheenandini milktirupatiಡಿ.ಕೆ.ಸುರೇಶ್ತಿರುಪತಿನಂದಿನಿ ತುಪ್ಪುನಂದಿನಿ ಹಾಲು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
22 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
23 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
24 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
31 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
36 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?