LatestMain PostNational

ಪೊಲೀಸ್ ಅಧಿಕಾರಿ, ನಾಗರಿಕ ಹತ್ಯೆ – ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ 2 ಉಗ್ರರ ಹತ್ಯೆ, ಇನ್ನಿಬ್ಬರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಅಧಿಕಾರಿ ಮತ್ತು ನಾಗರಿಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಅಪರಿಚಿತ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಎಲ್‌ಇಟಿ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ನಾಗರಿಕ ಮತ್ತು ಪೊಲೀಸ್ ಅಧಿಕಾರಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮಕ್ಕಳನ್ನು ಹೊಂದುವ ದಂಪತಿಗೆ 23.5 ಲಕ್ಷ ಸಾಲ ಸೌಲಭ್ಯ – ಚೀನಾ ಆಫರ್

ದಕ್ಷಿಣ ಭಾರತದ ಶೋಪಿಯಾನ್ ಚೌಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ತಿಳಿದು ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತ್ತು. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಉಗ್ರರನ್ನು ವಶಕ್ಕೆ ಪಡೆಯಲು ಭದ್ರತಾ ಪಡೆ ಮುಂದಾಗಿತ್ತು. ಆದರೆ ಭದ್ರತಾ ಪಡೆಯ ವಿರುದ್ಧ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಸಿಬ್ಬಂದಿ ಎನ್‌ಕೌಂಟರ್ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅವರು ಯಾರು, ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಚಳಿಗಾಲದಲ್ಲಿ ಧರಿಸಬಹುದಾದ 5 ಸ್ಟೈಲಿಶ್ ಕ್ಯಾಪ್‍ಗಳು

Leave a Reply

Your email address will not be published.

Back to top button