ದಾವಣಗೆರೆ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ವಾಹನ ಮನೆಯೊಂದಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ.
ದೇವರಹಳ್ಳಿ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಎರಡು ಲಾರಿಗಳು ಮುಖಮುಖಿ ಡಿಕ್ಕಿಯಾಗಿ ಅಪಘಾತಕ್ಕಿಡಾಗಿದೆ. ಲಾರಿಗಳ ನಡುವೆ ಡಿಕ್ಕಿಯಾದ ರಭಸಕ್ಕೆ ಒಂದು ಲಾರಿ ಏಕಾಏಕಿ ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿದೆ. ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಲಾರಿ ಚಾಲಕರ ಸ್ಥಿತಿ ಚಿಂತಾಜಕವಾಗಿದ್ದು, ಅವರನ್ನೂ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.