ಹೈದರಾಬಾದ್: ಇಬ್ಬರು ಬಾಮೈದುನರು ಸೇರಿಕೊಂಡು ಬಾವನನ್ನು ಕೊಲೆ ಮಾಡಿ ಆತನ ರುಂಡವನ್ನು ಕತ್ತರಿಸಿಕೊಂಡು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಂಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ದಾಂ (26) ಕೊಲೆಯಾದ ಬಾವ. ಇರ್ಫಾನ್ ಮತ್ತು ಗೌಸ್ ಇಬ್ಬರು ಬಾಮೈದುನರು ಸೇರಿಕೊಂಡು ಕುಡುಗೋಲಿನಿಂದ ಹತ್ಯೆ ಮಾಡಿದ್ದಾರೆ.
ಆರೋಪಿಗಳಿಬ್ಬರು ಸದ್ದಾಂ ತಲೆಯನ್ನು ಪೊಲೀಸ್ ಠಾಣೆಗೆ ತಂದು ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರ ನಡುವೆ ಕೆಲವು ಕೌಟುಂಬಿಕ ವಿವಾದಗಳು ನಡೆಯುತ್ತಿದ್ದವು. ಹೀಗಾಗಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಮೆಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯಕ್ಕೆ ಈ ಕುರಿತು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತ ಸದ್ದಾಂ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.