ಮುಂಬೈ: ಪಬ್‍ಜಿ ಆಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ಭಾನುವಾರ ಸಂಜೆ ಮಹರಾಷ್ಟ್ರದ ಹಿಂಗೋಲಿಯಲ್ಲಿ ನಡೆದಿದೆ.
ನಾಗೇಶ್ ಗೋರೆ(24) ಹಾಗೂ ಸ್ವಪ್ನಿಲ್ ಅನ್ನಪುರ್ಣೆ(22) ಪಬ್‍ಜಿ ಆಡುತ್ತಾ ಪ್ರಾಣ ಕಳೆದುಕೊಂಡ ಯುವಕರು. ನಾಗೇಶ್ ಹಾಗೂ ಸ್ವಪ್ನಿಲ್ ಪಬ್‍ಜಿ ಆಡುತ್ತಾ ರೈಲ್ವೆ ಹಳಿ ದಾಟುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
Advertisement
ನಾಗೇಶ್ ಹಾಗೂ ಸ್ವಪ್ನಿಲ್ ಪಬ್‍ಜಿ ಗೇಮ್‍ನಲ್ಲಿ ಮಗ್ನರಾಗಿದ್ದರು. ಈ ವೇಳೆ ಅವರು ರೈಲ್ವೆ ಹಳಿ ದಾಟಲು ಮುಂದಾದಾಗ ಹೈದರಾಬಾದ್- ಅಜ್ಮೇರ್ ರೈಲು ಅವರ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಏನಿದು ಪಬ್ ಜಿ?
ಪಬ್ ಜಿ ಎನ್ನುವುದು ಒಂದು ಬ್ಯಾಟಲ್ ಫೀಲ್ಡ್ ಗೇಮ್ (ಯುದ್ಧ ಭೂಮಿ ಆಟ). ಈ ಆಟದ ಸಂಪೂರ್ಣ ಭೂಪಟವನ್ನು ಆಟಗಾರಿಗೆ ಮೊದಲು ತೋರಿಸಲಾಗುತ್ತದೆ. ಬಳಿಕ ಆಟಗಾರರು ತಮಗೆ ಬೇಕಾದ ಪ್ರದೇಶವನ್ನು ಆಯ್ದುಕೊಂದು ಆ ಪ್ರದೇಶಕ್ಕೆ ವಿಮಾನದಿಂದ ಕೆಳಗೆ ಹಾರಿ ಮನೆಗಳತ್ತ ಓಡ್ತಾರೆ. ಆಟಗಾರರಿದ್ದ ಪ್ರದೇಶದಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳನ್ನು, ಮೆಡಿಕಲ್ ಕಿಟ್‍ಗಳನ್ನು, ಯುದ್ಧಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಆಯ್ದುಕೊಂಡು ಮುಂದೆ ಸಾಗುತ್ತಾರೆ. ಆಟಗಾರರು ಇಳಿದ ಪ್ರದೇಶದ ಸುತ್ತ ವೃತ್ತವೊಂದು ಸಣ್ಣದಾಗುತ್ತೆ. ಆಗ ಅಲ್ಲಿದ್ದ ನೂರಾರು ಜನರ ಜೊತೆ ಹೋರಾಡಿ ಉಳಿದರೇ ಗೆದ್ದಂತೆ, ಮೃತಪಟ್ಟರೆ ಸೋತಂತೆ. ಈ ಆಟದ ವಿಶೇಷ ಏನೆಂದರೆ ಸ್ನೇಹಿತರ ಜೊತೆ ಸೇರಿ ಆಡಬಹುದು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv