ಶ್ರೀನಗರ: ಕಾಶ್ಮೀರದ (Jammu and Kashmir) ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಗಾಯಗೊಂಡ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶ (Uttar Pradesh) ಮೂಲದ ಸಂಜಯ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -
ಉಗ್ರರ ದಾಳಿಯ ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದೆ.
- Advertisement -
- Advertisement -
ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರ ಮೇಲೆ ಇತ್ತೀಚೆಗೆ ಉಗ್ರರು ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವೈದ್ಯ ಮತ್ತು ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದರು. ಇದಾದ 12 ದಿನಗಳ ನಂತರ ಇಂದು ದಾಳಿ ಸಂಭವಿಸಿದೆ.
- Advertisement -
ದಾಳಿಗೊಳಗಾದ ವೈದ್ಯ ಮತ್ತು ಕಾರ್ಮಿಕರು ಸೆಂಟ್ರಲ್ ಕಾಶ್ಮೀರದ ಗಂದರ್‌ಬಾಲ್‌ನಲ್ಲಿರುವ ಗಗನೀರ್‌ನಿಂದ ಸೋನಾಮಾರ್ಗ್‌ಗೆ ಸಂಪರ್ಕ ಕಲ್ಪಿಸುವ Z-ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದಲ್ಲಿದ್ದವರಾಗಿದ್ದರು.