ಬೆಂಗಳೂರು: ಎರಡು ತಿಂಗಳ ಮಗುವನ್ನು ಏರ್ ಆಂಬುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ.
Advertisement
ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಹೊಸೂರು ರಸ್ತೆಯ ನಾರಾಯಣ ಹೆಲ್ತ್ ಸಿಟಿಗೆ ಕೇವಲ 7 ನಿಮಿಷಗಳಲ್ಲಿ ಮಗುವನ್ನ ಸ್ಥಳಾಂತರಿಸಲಾಯಿತು. ಎರಡು ತಿಂಗಳ ಮಗುವು ಶ್ವಾಸಕೋಶ ತೊಂದರೆ ಹಾಗೂ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು 2 ದಿನಗಳಿಂದ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ತ್ವರಿತ ಮತ್ತು ಹೆಚ್ಚಿನ ಚಿಕಿತ್ಸೆಗೆಗಾಗಿ ಮಗುವನ್ನು ನಾರಾಯಣ ಹೆಲ್ತ್ ಸಿಟಿಗೆ ಸ್ಥಳಾಂತರಿಸಬೇಕಾಗಿತ್ತು.
Advertisement
Advertisement
ಬೆಂಗಳೂರಿನ ಟ್ರಾಫಿಕ್ ಜಂಜಾಟದಲ್ಲಿ ಮಗುವನ್ನು ಅಷ್ಟು ಬೇಗ ಆಸ್ಪತ್ರೆಗೆ ಸಾಗಿಸುವುದು ಕಷ್ಟವೇ ಆಗಿತ್ತು. ಆಗ ಮಗುವಿನ ಪೋಷಕರು ಏರ್ ಆಂಬುಲೆನ್ಸ್ ಸಹಾಯ ಪಡೆದು ಕೇವಲ 7 ನಿಮಿಷಗಳಲ್ಲಿ ಮಗುವನ್ನು ರವಾನಿಸಿದ್ದಾರೆ. ಮಗುವನ್ನು ದಾಖಲಿಸಿಕೊಂಡಿರುವ ನಾರಾಯಣ ಹೆಲ್ತ್ ಸಿಟಿ ವೈದ್ಯರು ಮಗುವಿಗೆ ಚಿಕಿತ್ಸೆಗೆ ಆರಂಭಿಸಿದ್ದು, ಮಗು ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಶೀಘ್ರವೇ ಮಗುವನ್ನು ಗುಣಮುಖವಾಗಿಸುವುದಾಗಿ ವೈದ್ಯರು ಭರವಸೆ ನೀಡಿದ್ದಾರೆ.