ಇಂಫಾಲ್: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ (Manipur Women Paraded) ಪ್ರಕರಣದಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಅಮಾನವೀಯ ಘಟನೆ ನಡೆದ ದಿನವೇ ಮತ್ತಿಬ್ಬರು ಯುವತಿಯರ ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ತಮ್ಮ ಮಕ್ಕಳು ಪತ್ತೆಯಾಗದಿರುವ ಬಗ್ಗೆ ದೂರು ನೀಡಿರುವ ಪೋಷಕರು, ಅತ್ಯಾಚಾರ ಮತ್ತು ಕೊಲೆ ಆರೋಪ ಮಾಡಿದ್ದಾರೆ. ಇದು ಮಣಿಪುರದ (Manipur) ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.
ರಾಜ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಇಬ್ಬರು ಬುಡಕಟ್ಟು ಯುವತಿಯರ (Young Women) ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಯುವತಿಯರು 21 ಮತ್ತು 24 ವರ್ಷ ವಯಸ್ಸಿನವರಾಗಿದ್ದು, ಕಾರ್ ವಾಶ್ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇ 4 ರಂದು ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಜಾಮೀನು ನೀಡಿದ್ದಕ್ಕೆ ಹೈಕೋರ್ಟ್ ಕಿಡಿ
ಅಂದು ಕಾರ್ ವಾಶ್ ಗ್ಯಾರೆಜ್‌ನಲ್ಲಿ ಯುವತಿಯರು ಕೆಲಸ ಮಾಡುತ್ತಿದ್ದ ವೇಳೆ ಪುರುಷರ ದೊಡ್ಡ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ. ನಂತರ ಗ್ಯಾರೇಜ್ ಕೊಠಡಿಯೊಳಗೆ ಎಳೆದೊಯ್ದು ಬಾಯಿಗೆ ಬಟ್ಟೆ ತುರಕಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ನಂತರ ಇಬ್ಬರನ್ನೂ ಹತ್ಯೆಗೈದು ಸಮೀಪದ ಕಾರ್ಖಾನೆಯೊಂದರ ಪಕ್ಕದಲ್ಲಿ ಶವಗಳನ್ನ ಎಸೆದುಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬ ದೂರಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್
ಆರಂಭದಲ್ಲಿ ಯುವತಿಯರ ಗುರುತು ಪತ್ತೆ ಮಾಡುವುದು ಕಷ್ಟವಾಗಿತ್ತು. ಕೊನೆಗೆ ಸಂತ್ರಸ್ತರ ತಾಯಿಯೊಬ್ಬರು ಮೇ 16ರಂದು ಸಾಯಿಕುಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿತ್ತು. ಆಕೆ ತನ್ನ ಮಗಳೊಂದಿಗೆ ಮತ್ತೊಬ್ಬಳು ಯುವತಿಯನ್ನ ಅತ್ಯಾಚಾರಗೈದು ಕ್ರೂರವಾಗಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ನಂತರ ಎಫ್‌ಐಆರ್ ಅನ್ನು ಇಂಫಾಲ್ ಪೂರ್ವ ಜಿಲ್ಲೆಯ ಪೊರೊಂಪತ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು.
ಸದ್ಯ ಸಂತ್ರಸ್ತರ ಮೃತದೇಹಗಳು ಪತ್ತೆಯಾಗಿಲ್ಲ. ಆದ್ರೆ ಸುಮಾರು 100 ರಿಂದ 200 ಪುರುಷರ ಗುಂಪು ಯುವತಿಯರ ಮೇಲೆ ದಾಳಿ ನಡೆಸಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಗೆ ಬೆಳಕಿಗೆ ಬರುತ್ತಿದ್ದಂತೆ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇದು ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
Web Stories