ನವದೆಹಲಿ: ಭೀಕರ ಭೂಕಂಪಕ್ಕೆ(Earthquake) ತುತ್ತಾಗಿರುವ ಟರ್ಕಿಗೆ ನೆರವು ನೀಡಲು ಭಾರತ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ಮತ್ತು ವೈದ್ಯಕೀಯ ತಂಡ, ಪರಿಹಾರ ಸಾಮಾಗ್ರಿಗಳೊಂದಿಗೆ ಟರ್ಕಿಗೆ (Turkey) ತೆರಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ನೇತೃತ್ವದಲ್ಲಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ (PMO) ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
Advertisement
ವಿಶೇಷ ತರಬೇತಿ ಪಡೆದ ಶ್ವಾನದಳ ಮತ್ತು ಅಗತ್ಯ ಉಪಕರಣಗಳೊಂದಿಗೆ 100 ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್‌ಡಿಆರ್‌ಎಫ್ (NDRF) ತಂಡಗಳು ಭೂಕಂಪ ಪೀಡಿತ ಪ್ರದೇಶಗಳಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತೆರಳಲಿವೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Advertisement
Şanlıurfa, Bahçelievler Mahallesi'nde yeni çöken bir bina olduğu belirtiliyor.
BİNALARA GİRMEYİN ARTÇI SARSINTILAR DEVAM EDİYOR. pic.twitter.com/k9KxoDk2JV
— Haskologlu – Arşiv (@_DoguPala) February 6, 2023
Advertisement
“ತರಬೇತಿ ಪಡೆದ ವೈದ್ಯರು ಮತ್ತು ಅರೆವೈದ್ಯರೊಂದಿಗೆ ಅಗತ್ಯ ಔಷಧಿಗಳೊಂದಿಗೆ ವೈದ್ಯಕೀಯ ತಂಡಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಟರ್ಕಿ ಸರ್ಕಾರ ಮತ್ತು ಅಂಕಾರಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಇಸ್ತಾನ್‌ಬುಲ್‌ನಲ್ಲಿರುವ ಕಾನ್ಸುಲೇಟ್ ಜನರಲ್ ಕಚೇರಿಯೊಂದಿಗೆ ಸಮನ್ವಯದೊಂದಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗುವುದು” ಎಂದು ಪಿಎಂಒ ಹೇಳಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಬೈಕ್ ಸವಾರನ ಹುಚ್ಚಾಟ
Advertisement
Entire buildings collapsed in S. #Turkey the epicenter of 7.8 magnitude earthquake in last hour, that also sent shockwaves to Syria, Lebanon, Iraq, Israel, Palestine, Cyprus. We don’t know death toll yet: https://t.co/A7fomc3AXT
— Joyce Karam (@Joyce_Karam) February 6, 2023
ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ (Narendra Modi) ಭೂಕಂಪದಲ್ಲಿ ಸಾವನ್ನಪ್ಪಿದ್ದವರಿಗೆ ಸಂತಾಪ ಸೂಚಿಸಿದ್ದರು. ಸಂತ್ರಸ್ತರ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪ. ಈ ಕಷ್ಟದ ಸಮಯದಲ್ಲಿ ನೆರವು ಮತ್ತು ಬೆಂಬಲವನ್ನು ನೀಡಲು ಬದ್ಧರಾಗಿದ್ದೇವೆ ಎಂದು ಹೇಳಿದರು.
ಮಧ್ಯ ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು 1600ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ದೊಡ್ಡ ಕಟ್ಟಡಗಳು ಧರೆಗೆ ಉರುಳಿದ್ದು ಹಲವು ಮಂದಿ ಅವಶೇಷದ ಒಳಗಡೆ ಸಿಲುಕಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k