ಭುವನೇಶ್ವರ: 15ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿಯಾಗಿದ್ದ ಆಕೆಯನ್ನು ಜೀವಂತವಾಗಿ ಹೂತುಹಾಕಲು ಯತ್ನಿಸಿದ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.
ಒಡಿಶಾದ (Odisha) ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ಇಬ್ಬರು ಸಹೋದರರು ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. 5 ತಿಂಗಳ ಗರ್ಭಿಣಿಯಾಗಿದ್ದ ಆಕೆಯನ್ನು ಜೀವಂತವಾಗಿ ಹೂತುಹಾಕಲು ಯತ್ನಿಸಿದ್ದರು. ಇದನ್ನೂ ಓದಿ: ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಬನಶಬರಾ ಗ್ರಾಮದಿಂದ ಭಾಗ್ಯಾಧರ್ ದಾಸ್ ಮತ್ತು ಪಂಚನನ್ ದಾಸ್ ಹೆಸರಿನ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮೂರನೆಯ ಶಂಕಿತ ಕಾಣೆಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಆರೋಪಿಗಳು ಅಪ್ರಾಪ್ತೆ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ. ಆಕೆ ಗರ್ಭಿಣಿಯಾಗಿರುವುದನ್ನು ತಿಳಿದು, ತಮ್ಮ ಅಪರಾಧವನ್ನು ಮರೆಮಾಚಲು ಆಕೆ ಹತ್ಯೆಗೆ ಮುಂದಾಗಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಅಪ್ರಾಪ್ತೆ ತನ್ನ ತಂದೆಗೆ ಘಟನೆ ಬಗ್ಗೆ ವಿವರಿಸಿದ್ದಾಳೆ. ನಂತರ ಜಿಲ್ಲಾ ಪ್ರಧಾನ ಕಚೇರಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಳೆ. ಕುಜಾಂಗ್ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಸಲ್ಲಿಸಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್
ಬಂಧಿತ ಇಬ್ಬರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಒಂದು ವಾರದ ಅವಧಿಯಲ್ಲಿ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದೆ.