ಇಟಾನಗರ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ಸಂಭವಿಸಿದ ಚೀತಾ ಹೆಲಿಕಾಪ್ಟರ್ (Cheetah Helicopter) ದುರಂತದಲ್ಲಿ ಭಾರತೀಯ ಸೇನೆಯ (Indian Army) ಇಬ್ಬರು ಪೈಲಟ್‌ಗಳು (Pilots) ಹುತಾತ್ಮರಾಗಿದ್ದಾರೆ.
ಪೈಲಟ್ ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ದುರಂತದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ
Advertisement
#LtGenRPKalita #ArmyCdrEC & All Ranks offer tribute to the supreme sacrifice of Lt Col VVB Reddy & Maj Jayanth A, in the line of duty at Mandala, #ArunachalPradesh while carrying out operational flying of Cheetah Helicopter. #IndianArmy stands firm with the bereaved families pic.twitter.com/XimeZQ0pan
— EasternCommand_IA (@easterncomd) March 16, 2023
Advertisement
ಅರುಣಾಚಲ ಪ್ರದೇಶದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಆರ್ಮಿ ಏವಿಯೇಷನ್‌ನ ಚೀತಾ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸುತ್ತಿತ್ತು. ಜಿಲ್ಲೆಯ ಸಂಗೆ ಗ್ರಾಮದಿಂದ ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ಮಿಸ್ಸಮರಿ ಕಡೆಗೆ ತೆರಳುತ್ತಿತ್ತು. ಬೆಳಗ್ಗೆ 9.15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ (ATC) ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಮಂಡಲ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದರು.
Advertisement
Advertisement
ಘಟನೆ ಬಳಿಕ ಸಶಸ್ತç ಸೀಮಾ ಬಾಲ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸೇರಿದಂತೆ ಭಾರತೀಯ ಸೇನಾಪಡೆಯ ಐದು ತಂಡಗಳು ಕಾರ್ಯಾಚರಣೆ ನಡೆಸಿತ್ತು. ಕೆಲ ಗಂಟೆಗಳ ಬಳಿಕ ಮಂಡಲದ ಪೂರ್ವ ಗ್ರಾಮದ ಬಂಗ್ಲಾಜಾಪ್ ಬಳಿ ವಿಮಾನ ಅವಶೇಷಗಳು ಪತ್ತೆಯಾಗಿದ್ದು, ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ಆದೇಶಿಸಲಾಗಿದೆ. ಇದನ್ನೂ ಓದಿ: ಕೊಲೆ ಆರೋಪಿಗಳ ಜಮೀನಿಗೆ ನುಗ್ಗಿದ ಬುಲ್ಡೋಜರ್ – ಬೆಳೆಗಳು ನೆಲಸಮ
ಹೆಲಿಕಾಪ್ಟರ್ ಅಪಘಾತಕ್ಕೀಡಾದ ಪ್ರದೇಶದಲ್ಲಿ ಮೊಬೈಲ್ ಸಂಪರ್ಕ ಸಾಧ್ಯವಿಲ್ಲ. ಅಲ್ಲದೇ ಹೆಚ್ಚಾಗಿ ಮಂಜಿನಿಂದ ಕೂಡಿತ್ತು ಎಂದು ವಿಶೇಷ ತನಿಖಾ ಕೋಶದ (SIC) ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.