ಬೆಂಗಳೂರು: ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಿದ್ದ ದುಷ್ಕರ್ಮಿಗಳು ಡ್ರೈವಿಂಗ್ ಸೀಟನ್ನೇ (Driving Seat) ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು ಅನ್ನೋದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹೌದು. ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟನ್ನೇ ಟಾರ್ಗೆಟ್ ಮಾಡಿದ್ದರು. ಆದ್ರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು
ಏನಿದು ಘಟನೆ?
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ
ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್