– ಭಯೋತ್ಪಾದರ ದಾಳಿಗೆ ಇಬ್ಬರು ವಲಸೆ ಕಾರ್ಮಿಕರು ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಬಾರಾಮುಲ್ಲಾದಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿಯಲ್ಲಿ ಇಬ್ಬರು ಹಮಾಲರು ಕೂಡ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಬಾರಾಮುಲ್ಲಾದ ಬುತಪತ್ರಿಯ ಸಾಮಾನ್ಯ ಪ್ರದೇಶದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಖಚಿತಪಡಿಸಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ
ಇಂದು ಸಂಜೆ ಬೂತಪತ್ರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರು ಮೊದಲು ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಲಾಗಿತ್ತು. ಇದಾದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ. ಗಾಯಗೊಂಡ ವ್ಯಕ್ತಿಯು ಉತ್ತರ ಪ್ರದೇಶದ ನಿವಾಸಿ ಪ್ರೀತಮ್ ಸಿಂಗ್ ಎಂದು ಗುರುತಿಸಲಾಗಿದೆ.
ಸೇನಾ ವಾಹನದ ಮೇಲೆ ಇಂದು ನಡೆದ ದಾಳಿಯು ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 72 ಗಂಟೆಗಳಲ್ಲಿ ನಡೆದ ಎರಡನೇ ದಾಳಿಯಾಗಿದೆ. ಮೂರು ದಿನಗಳ ಹಿಂದೆ ಇಬ್ಬರು ಭಯೋತ್ಪಾದಕರು ಸುರಂಗವನ್ನು ನಿರ್ಮಿಸುವ ಕಾರ್ಮಿಕರ ವಸತಿ ಶಿಬಿರದ ಮೇಲೆ ದಾಳಿ ಮಾಡಿದ್ದರು. ದಾಳಿಯಲ್ಲಿ ಆರು ಮಂದಿ ಕಾರ್ಮಿಕರು ಮತ್ತು ಒಬ್ಬ ವೈದ್ಯ ಹತ್ಯೆಯಾಗಿದ್ದರು. ಹತ್ಯೆಯಾದವರು ಕಾಶ್ಮೀರದ ನಾಯೀದ್ಗಾಮ್‌ನ ಬದ್ಗಾಮ್‌ನ ಡಾ.ಶಹನವಾಜ್ ಮತ್ತು ಪಂಜಾಬ್‌ನ ಗುರುದಾಸ್‌ಪುರದ ಗುರ್ಮೀತ್ ಸಿಂಗ್ ಹಾಗೂ ಬಿಹಾರದ ಮೊಹಮ್ಮದ್ ಹನೀಫ್, ಫಹೀಮ್ ನಾಸಿರ್ ಮತ್ತು ಕಲೀಂ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಿಹಾರ, ಆಂಧ್ರಕ್ಕೆ ಬಂಪರ್ ಗಿಫ್ಟ್ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು