ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರಬನಿ ಗಡಿ ನಿಯಂತ್ರಣ ರೇಖೆಯ ಬಳಿ ಸಂಭವಿಸಿದ ಗಣಿ ಸ್ಫೋಟದಿಂದಾಗಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
Advertisement
ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳದಲ್ಲಿದ್ದ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫಿಶ್ ಕರಿ ಬೇಕು ಎಂದ ಸ್ನೇಹಿತನ ಬರ್ಬರ ಹತ್ಯೆ
Advertisement
ನೌಶೇರಾ ಪ್ರದೇಶದಲ್ಲಿ ಗಸ್ತು ನಡೆಸುತ್ತಿದ್ದಾಗ ಗಣಿ ಸ್ಫೋಟ ಸಂಭವಿಸಿದೆ. ಈ ವೇಳೆ ಇಬ್ಬರು ಭಾರತೀಯ ಯೋಧರು ಗಂಭೀರ ಗಾಯಗೊಂಡು ಮೃತಪಟ್ಟರು. ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಜಮ್ಮು ಪ್ರದೇಶದ ರಕ್ಷಣಾ ವಕ್ತಾರ ತಿಳಿಸಿದ್ದಾರೆ.
Advertisement
Advertisement
ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸೆಪಾಯ್ ಮಂಜಿತ್ ಸೈನಿಕರು ಹುತಾತ್ಮರಾಗಿದ್ದಾರೆ. ರಿಷಿ ಕುಮಾರ್ ಬಿಹಾರದ ಬೇಗುಸರಾಯ್ ನಿವಾಸಿಯಾಗಿದ್ದರು. ಮಂಜಿತ್ ಸಿಂಗ್ ಪಂಜಾಬ್‍ನ ಭಟಿಂಡಾದವರು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 2022ರ ಅಂತ್ಯಕ್ಕೆ 5 ಬಿಲಿಯನ್ ಡೋಸ್ ಕೋವಿಡ್ ಲಸಿಕೆ ವಿತರಣೆಗೆ ಭಾರತ ಸಿದ್ಧ: ಪ್ರಧಾನಿ ಮೋದಿ
ಪೂಂಚ್‍ನ ಅರಣ್ಯ ಪ್ರದೇಶದಲ್ಲಿ ಅಡಗಿರುವ ಉಗ್ರರ ವಿರುದ್ಧ ಹೋರಾಟದಲ್ಲಿ ಈವರಗೆ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ. ಕಳೆದ 18 ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಡೆದ ದೀರ್ಘ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಇದಾಗಿದೆ.