ಸಿಯೋಲ್: ದಕ್ಷಿಣ ಕೊರಿಯಾದ ವಾಯುಪಡೆಯ ಎರಡು ತರಬೇತಿ ವಿಮಾನಗಳು ಶುಕ್ರವಾರ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಲ್ಲಿ ಮೂವರು ಪೈಲಟ್‌ಗಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಆಗ್ನೇಯ ನಗರದ ಸಚೆನ್‌ನಲ್ಲಿ ಮಧ್ಯಾಹ್ನ 1:35 ಕ್ಕೆ (0435 GMT) KT-1 ವಿಮಾನಗಳ ನೆಲೆಯ ಬಳಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಹಾಗೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಾಯುಪಡೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
Advertisement
Advertisement
ದುರಂತದಲ್ಲಿ ಮೂವರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಒಬ್ಬರು ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳನ್ನು ಮಾಹಿತಿ ನೀಡಿದ್ದಾರೆ.
Advertisement
30 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಅಪಘಾತದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಯುದ್ಧದ ನಡುವೆಯೇ ದೆಹಲಿಗೆ ಬಂದಿಳಿದ ರಷ್ಯಾ ವಿದೇಶಾಂಗ ಸಚಿವ