ರಾಂಚಿ: ಎರಡು ಅಂತಸ್ತಿನ ಕಟ್ಟಡ (Building Collapse) ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜಾರ್ಖಂಡ್‌ನ (Jharkhand) ದಿಯೋಘರ್ (Deoghar) ಜಿಲ್ಲೆಯಲ್ಲಿ ನಡೆದಿದೆ.
ಬೆಳಗ್ಗೆ 6 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಹೆಚ್‌ಡಿಕೆ
ಘಟನೆಯಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ಹೊರತೆಗೆದು ಸದರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ. ಒಂದು ಮಗು ಸೇರಿದಂತೆ ಮೂವರಿಗೆ ಚಿಕಿತ್ಸೆ ನಡೆಯುತ್ತಿದೆ. ದಿಯೋಘರ್ ಸಿವಿಲ್ ಸರ್ಜನ್ ರಂಜನ್ ಸಿನ್ಹಾ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್ ಶಿಂಧೆ ಬಣದ ನಾಯಕನ ಪುತ್ರ ಆರೋಪಿ
ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತೆ ತೋರುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ದಿಯೋಘರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ರಿತ್ವಿಕ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಎನ್‌ಡಿಆರ್‌ಎಫ್ ಇನ್ಸ್ಪೆಕ್ಟರ್ ರಣಧೀರ್ ಕುಮಾರ್, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್‌ಟಿಎಸ್ ಬಾಂಬ್