ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆ ಗೋಪಾಲನ್ ಮಾಲ್ ಬಳಿ ನಡೆದಿದೆ.
ಮೈಸೂರು ರಸ್ತೆಯ ಮೂಲಕ ಮೆಜೆಸ್ಟಿಕ್ ನತ್ತ ಬಸ್ ಹೋಗುತ್ತಿತ್ತು. ಈ ವೇಳೆ ಬ್ರೇಕ್ ಫೇಲ್ ಆಗಿ ಬಸ್ ಪಾದಚಾರಿ ಮಾರ್ಗದ ಮೇಲೆ ನುಗ್ಗಿದೆ. ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
Advertisement
ದೊಡ್ಡ ಬಸ್ತಿಯಿಂದ ಮಾರ್ಕೆಟ್ ಕಡೆಗೆ ಬಸ್ ಹೋಗುತ್ತಿತ್ತು. ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಕಾಂಪೌಂಡ್ ಗೆ ಗುದ್ದಿದೆ. ಈ ಅಪಘಾತದ ಕಾರಣ ಮೈಸೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv