ಲಕ್ನೋ: ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆ ಉತ್ತರ ಪ್ರದೇಶದ ಮಥುರಾ ದೇವಾಲಯದಲ್ಲಿ ಶುಕ್ರವಾರ ಜನದಟ್ಟಣೆ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹಠಾತ್ತನೆ ಏರಿಕೆಯಾಗಿ, ಆರತಿಯ ಸಮಯ ದೇವಾಲಯದ ಒಳಗೆ ಜನರು ನುಗ್ಗಲಾರಂಭಿಸಿದರು. ಈ ವೇಳೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನೂ 6 ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಥುರಾದ ಹಿರಿಯ ಪೊಲೀಸ್ ಅಭಿಷೇಕ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ನಿಮಗಿಂತ ದೊಡ್ಡ ಗೂಂಡಾಗಳು: ಚರ್ಚೆಗೆ ಕಾರಣವಾದ ಬಿಜೆಪಿ ನಾಯಕನ ಹೇಳಿಕೆ
Advertisement
Advertisement
ಮಥುರಾವನ್ನು ಕೃಷ್ಣನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಪುರಾಣಗಳ ಪ್ರಕಾರ, ಶ್ರೀಕೃಷ್ಣನ ಜನನ ಮಧ್ಯರಾತ್ರಿಯಲ್ಲಿ ನಡೆದಿದ್ದು, ಈ ವೇಳೆಯ ಮಂಗಳಾರತಿಗೆ ಜನರು ಪ್ರಸಾದವನ್ನು ಸ್ವೀಕರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಕುಟುಂಬದಂತೆ: ಓದಿನ ನೆರವಿಗಾಗಿ ಅಫ್ಘನ್ ಯುವತಿಯಿಂದ ಮೋದಿಗೆ ಮನವಿ
Advertisement
ಘಟನೆಗೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜ್ಯದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಬದ್ಧರಾಗಿರುವುದಾಗಿ ತಿಳಿಸಿದರು.