ಶ್ರೀನಗರ: ಅಕ್ರಮವಾಗಿ ಭಾರತದ ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು (Terrorists) ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ.
ಕಾಶ್ಮೀರದ (Jammu Kashmir) ಕುಪ್ವಾರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಉಗ್ರರನ್ನು ಹಿಮ್ಮೆಟ್ಟಿಸುವ ವೇಳೆ ಗುಂಡಿನ ಕಾಳಗ ಏರ್ಪಟ್ಟಿದ್ದು ಈ ವೇಳೆ ಉಗ್ರರನ್ನು ಹತ್ಯೆ ಮಾಡಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಹೇಳಿದೆ. ಇದನ್ನೂ ಓದಿ: ದೆಹಲಿಗೆ ಡ್ರಗ್ ರಾಕೆಟ್ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ
Advertisement
Advertisement
ಕುಪ್ವಾರದ ಗುಗಲ್‌ಧಾರ್‌ನಲ್ಲಿ ಸೈನಿಕರು ಅನುಮಾನಾಸ್ಪದ ಚಟುವಟಿಕೆ ಪತ್ತೆಯಾದ ಬಳಿಕ ಈಗ ಗುಂಡಿನ ಕಾಳಗ ನಡೆದಿದೆ ಎಂದು ಭದ್ರತಾ ಪಡೆಗಳು ಈ ಹಿಂದೆ ತಿಳಿಸಿದ್ದವು. ಅಕ್ಟೋಬರ್ 4 ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿ ನೀಡಿತ್ತು. ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜೆಕೆ ಪೋಲಿಸ್ ಜಂಟಿ ಕಾರ್ಯಾಚರಣೆಯನ್ನು ಕುಪ್ವಾರದ ಗುಗಲ್ಧರ್‌ನಲ್ಲಿ ಆರಂಭಿಸಿತ್ತು.
Advertisement
Advertisement
ಶೋಧ ಕಾರ್ಯದಲ್ಲಿ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಿದರು. ಈ ವೇಳೆ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ಆರಂಭವಾಯಿತು. ಭದ್ರತಾ ಪಡೆಗಳು ಈಗಾಗಲೇ ಇಬ್ಬರನ್ನು ಸೆದೆಬಡಿದಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಚಿನಾರ್ ಕಾರ್ಪ್ಸ್ ಹೇಳಿದೆ. ಇದನ್ನೂ ಓದಿ: ಮುಂದಿನ ವಾರ ಬೆಂಗಳೂರಿಗೆ ಬರಲಿದ್ದಾರೆ ಭಾರತ ವಿರೋಧಿ ಮಾಲ್ಡೀವ್ಸ್ ಅಧ್ಯಕ್ಷ