ಶ್ರೀನಗರ: ಜಮ್ಮು ಕಾಶ್ಮೀರದ (Jammu and Kashmir) ಬಂಡಿಪೋರಾ (Bandipora) ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ (LoC) ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಹೊಡೆದುರುಳಿಸಿದೆ.
ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ
ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು