ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಗಡಿ ನುಸುಳಲು ಯತ್ನಿಸಿದ ನಾಲ್ವರು ಉಗ್ರರ (Terrorists) ಪೈಕಿ ಇಬ್ಬರನ್ನು ಭದ್ರತಾ ಪಡೆಗಳು (Indian Army) ಹೊಡೆದುರುಳಿಸಿವೆ.
ಕಾರ್ಯಾಚರಣೆ ವೇಳೆ ಎರಡು ಎಕೆ 47 ರೈಫಲ್ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಪ್ಪಿಸಿಕೊಂಡ ಇನ್ನಿಬ್ಬರು ಉಗ್ರರಿಗಾಗಿ ಸೇನೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಭಯೋತ್ಪಾದಕರ ಅಡಗು ತಾಣಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮತದಾರರು ಪ್ರತಿ ಅಭ್ಯರ್ಥಿಯಿಂದ ಹಣ ಪಡೆದು ಸರಿಯಾದ ವ್ಯಕ್ತಿಗೆ ಮತ ಹಾಕ್ತಾರೆ: ಗಡ್ಕರಿ
Advertisement
Advertisement
ಅನಂತನಾಗ್‍ನ ದಟ್ಟವಾದ ಕಾಡುಗಳಲ್ಲಿ ಈ ತಿಂಗಳ ಆರಂಭದಲ್ಲಿ ಒಂದು ವಾರದ ಅವಧಿಯಲ್ಲಿ ಎನ್‍ಕೌಂಟರ್ ನಡೆಸಲಾಗಿತ್ತು. ಈ ವೇಳೆ ಲಷ್ಕರ್ ಕಮಾಂಡರ್ ಮತ್ತು ಇನ್ನೊಬ್ಬ ಭಯೋತ್ಪಾದಕನನ್ನು ಹತ್ಯೆಗೈಯಲಾಗಿತ್ತು. ಅಲ್ಲದೇ ಗುಂಡಿನ ಚಕಮಕಿಯಲ್ಲಿ ಮೂವರು ಅಧಿಕಾರಿಗಳು ಸೇರಿದಂತೆ ನಾಲ್ವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.
Advertisement
Advertisement
ಕೆಲವು ತಿಂಗಳ ಹಿಂದೆ ನಡೆದ ಸೇನಾ ವಾಹನದ ಮೇಲಿನ ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಲ್ಲದೇ ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವವರ ವಿರುದ್ಧವು ಅಗತ್ಯ ಕ್ರಮ ಜರುಗಿಸಲಾಗುತ್ತಿದೆ. ಇದನ್ನೂ ಓದಿ: 84 ಬ್ಯಾಂಕ್ ಅಕೌಂಟ್, 854 ಕೋಟಿ ವಹಿವಾಟು – ಬೃಹತ್ ಸೈಬರ್ ಕ್ರೈಂ ಜಾಲ ಬೆಳಕಿಗೆ
Web Stories