ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (jammu Kashmir) ಬಾರಾಮುಲ್ಲಾದಲ್ಲಿ ಇಂದು (ಬುಧವಾರ) ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಅವರ ಗುರುತು ಪತ್ತೆ ಹಚ್ಚಲಾಗಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ, ಕೇಂದ್ರಾಡಳಿತ ಪ್ರದೇಶದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: 24 ವರ್ಷಗಳ ಬಳಿಕ ಉತ್ತರ ಕೊರಿಯಾಗೆ ಪುಟಿನ್ ಭೇಟಿ – ರಷ್ಯಾ ಅಧ್ಯಕ್ಷನಿಗೆ ಭವ್ಯ ಸ್ವಾಗತ
ಭಾನುವಾರ ರಾತ್ರಿ ಜಿಲ್ಲೆಯ ಅರಗಂ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿದ ಬಳಿಕ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.