ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಥುವಾ ಗ್ರಾಮವೊಂದರಲ್ಲಿ ನಿನ್ನೆ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧನೊಬ್ಬ ಕೂಡ ಸಾವನ್ನಪ್ಪಿದ್ದಾನೆ.
ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ ಎರಡು ಎನ್‌ಕೌಂಟರ್‌ಗಳು ಬೆಳಗಿನ ವರೆಗೂ ನಡೆದಿತ್ತು. ಸೇನಾ ಪೋಸ್ಟ್‌ನ ಮೇಲಿನ ದಾಳಿಯಿಂದಾಗಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಗಾಯಗೊಂಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್ ಮೇಲೆ ಉಗ್ರರ ದಾಳಿ
ಜಮ್ಮುವಿನಲ್ಲಿ ಈ ಭಯೋತ್ಪಾದಕ ದಾಳಿಗೂ ಎರಡು ದಿನ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ವೊಂದು ರಿಯಾಸಿಯಲ್ಲಿ ದಾಳಿಗೆ ತುತ್ತಾಗಿತ್ತು. ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ 9 ಪ್ರಯಾಣಿಕರು ಹತರಾಗಿದ್ದರು.
ಕಥುವಾದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಇಂದು ಬೆಳಗ್ಗೆ ಎನ್‌ಕೌಂಟರ್‌ಗಳ ಬಗ್ಗೆ ವಿವರ ಪಡೆದಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ
ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಉನ್ನತ ಮಟ್ಟದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದರು.