ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಅಲ್ ಖೈದಾ ಅಂಗಸಂಸ್ಥೆ ಅನ್ಸರ್ ಘಜ್ವತುಲ್ ಹಿಂದ್‌ನ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗುಂಡಿನ ದಾಳಿಗೆ ಸಾವನ್ನಪ್ಪಿದ ಫಯಾಜ್ ಕುಮಾರ್ ಮತ್ತು ಓವೈಸ್ ಖಾನ್ ಎಂದು ಗುರುತಿಸಲಾದ ಭಯೋತ್ಪಾದಕರು ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ
ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ತಾಜಿವಾರದಲ್ಲಿ ಅನಂತನಾಗ್ ಪೊಲೀಸರು ಆಕಸ್ಮಿಕವಾಗಿ ಎನ್‌ಕೌಂಟರ್ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದ್ವೇಷ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ; ದೇಶವನ್ನು ಕಳೆದುಕೊಳ್ಳಲು ಬಯಸಲ್ಲ – ರಾಹುಲ್ ಗಾಂಧಿ
ಜುಲೈ 3ರಂದು ಚೀನಿವುಡರ್ ಶ್ರೀಗುಫ್ವಾರಾದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಹಾಗೂ ಜೂನ್ 15 ರಂದು ಪಾದ್‌ಶಾಹಿ ಬಾಗ್‌ನಲ್ಲಿ ನಡೆದ ಗ್ರೆನೇಡ್ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಇವರು ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.