Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Districts

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Public TV
Last updated: March 8, 2026 6:09 pm
Public TV
Share
4 Min Read
Mallikarjun Kharge DK Shivakumar Priyank Kharge
SHARE

– ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ
– ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು

ಕಲಬುರಗಿ: ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ (Kalaburagi) ಜಿಲ್ಲೆಗೆ ನೀಡಲಾಗಿದೆ. ಸುಮಾರು 2000 ಮನೆಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

ಕಲಬುರಗಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

365 ಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೇವೆ. 400 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 2000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 330 ಶಾಲೆಗಳನ್ನು ಸ್ಥಾಪಿಸಲಾಗುತ್ತದೆ. ಜೊತೆಗೆ 2.50 ಲಕ್ಷ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು. ಸದ್ಯ 56,000 ಕ್ಕೂ ಅಧಿಕ ಖಾಲಿ ಹುದ್ದೆ ತುಂಬಲು ಈಗಾಗಲೇ ಕ್ರಮವಹಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ (Guarantee Scheme) ಮೂಲಕ ರಾಜ್ಯದ ಜನರಿಗೆ ನೆಮ್ಮದಿ ಜೀವನ ನಡೆಸಲು ಸರ್ಕಾರ ಪ್ರತಿ ವರ್ಷ 52,000 ಕೋಟಿ ರೂ.ಗೂ ಅಧಿಕ ವೆಚ್ಚ ಮಾಡುತ್ತಿದೆ. ಇದು ನಮ್ಮ ಬದ್ಧತೆ ಎಂದು ಹೇಳಿದರು.

ಸಾಧನೆ ತನ್ನ ಪಾಡಿಗೆ ಆಗುವುದಿಲ್ಲ. ಅದರ ಹಿಂದೆ ಶ್ರಮ ಇರಬೇಕು, ಛಲ ಇರಬೇಕು. ಜನರ ಬದುಕನ್ನು ಬದಲಾವಣೆ ಮಾಡುತ್ತೇನೆ ಎನ್ನುವ ಹಠ ಇರಬೇಕು. ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಅವರ ಋಣವನ್ನ ಕಲ್ಯಾಣ ಕರ್ನಾಟಕದ ಜನತೆ ತೀರಿಸಿದ್ದಾರೆ. 371 ಜೆ ಮೂಲಕ ಈ ಭಾಗದ ಜನರ ಬದುಕನ್ನು ಬದಲಾವಣೆ ಮಾಡಿದ್ದಾರೆ. ಈ ಭಾಗದಲ್ಲಿ ಸಂಸತ್ ಸದಸ್ಯರನ್ನು ಗೆಲ್ಲಿಸುವ ಮೂಲಕ ಅವರಿಗೆ ಋಣ ಸಂದಾಯ ಮಾಡಿದ್ದೀರಿ ಎಂದು ತಿಳಿಸಿದರು. ಇದನ್ನೂ ಓದಿ: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

ಚಿತ್ತಾಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಮುನ್ನುಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಭಾಗವಹಿಸಿ… pic.twitter.com/QGRaGvISV2

— DK Shivakumar (@DKShivakumar) March 8, 2026

ಪ್ರಿಯಾಂಕ್ ಭವಿಷ್ಯದ ನಾಯಕ
ನಮ್ಮ ರಾಜ್ಯಕ್ಕೆ ಭವಿಷ್ಯದ ನಾಯಕರಾಗಿ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಈ ಕಲಬುರಗಿ ಜನತೆ ನೀಡಿದ್ದಾರೆ. ಅವರಿಗೆ ನಮ್ಮೆಲ್ಲರ ಪರವಾಗಿ ಕೋಟಿ, ಕೋಟಿ ನಮಸ್ಕಾರಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯಕ್ಷಮತೆ ಅತ್ಯುತ್ತಮವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಮಾರ್ಗದರ್ಶನದಲ್ಲಿ‌ ಪ್ರಿಯಾಂಕ್ ಖರ್ಗೆ ಉತ್ತಮ‌ ಕೆಲಸ ಮಾಡುತ್ತಿದ್ದಾರೆ. ಯಾವುದೇ ಇಲಾಖೆಯ ಜವಾಬ್ದಾರಿ ನೀಡಿದರು ಅಷ್ಟೇ ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಪಕ್ಷ, ರಾಜ್ಯದ ಅಭಿವೃದ್ಧಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಸರ್ವ ಸಮುದಾಯಗಳ ಏಳಿಗೆಗೆ ದುಡಿಯುತ್ತಿದ್ದಾರೆ ಎಂದು ಹೇಳಿದರು.

ಅವರು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕನಕಪುರದ ಜನತೆ ನನಗೆ ಆಶೀರ್ವಾದ ಮಾಡಿದಂತೆ ನೀವು ಕೂಡಾ ಪ್ರಿಯಾಂಕ್ ಖರ್ಗೆ, ರಾಧಾಕೃಷ್ಣ ದೊಡ್ಡಮನಿ ಅವರಿಗೆ ಆಶೀರ್ವಾದ ಮಾಡಬೇಕು ಹಾಗೂ ಅವರ ಕುಟುಂಬದ ಜೊತೆಗೆ ಸದಾ ಇರಬೇಕು ಎಂದು ಮನವಿ ಮಾಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಿ ಕೆರೆಗಳನ್ನು ತುಂಬಿಸಿದವರು. ಅನೇಕ ಕಡೆ ಅಂತರ್ಜಲ ಸಾವಿರಾರು ಅಡಿ ತಲುಪಿತ್ತು. ಈಗ 300- 400 ಅಡಿಗಳಿಗೆ ನೀರು ದೊರೆಯುತ್ತಿದೆ ಎಂದು ತಿಳಿಸಿದರು.

 

ಚಿತ್ತಾಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಮುನ್ನುಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಭಾಗವಹಿಸಿ… pic.twitter.com/QGRaGvISV2

— DK Shivakumar (@DKShivakumar) March 8, 2026

ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಕೊಡುಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶತಮಾನಗಳ ಕಾಲ ಚಿರಸ್ಥಾಯಿಯಾಗಿ ಉಳಿಯಲಿದೆ‌. ಮರಕ್ಕೆ ಬೇರು ಮುಖ್ಯ ಅದೇ ರೀತಿ ಈ ಭಾಗದ ಜನರಿಗೆ ಖರ್ಗೆ ಅವರ ಮೇಲೆ ನಂಬಿಕೆ. ಕಲ್ಯಾಣ ಕರ್ನಾಟಕದ ಜನರ ಬದುಕಿಗೆ ಅವರು ಕೊಟ್ಟಂತ ಕೆಲಸಗಳು ಇಡೀ ದೇಶದ ಜನರಿಗೆ ಗೊತ್ತು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ 3 ರ ಅನುಷ್ಠಾನಕ್ಕೆ ಭೂಸ್ವಾಧೀನ ನಡೆಸಲು ಮುಂದಾಗಿದ್ದೇವೆ. ಒಂದು ಎಕರೆಗೆ 35- 40 ಲಕ್ಷ ರೂ. ಪರಿಹಾರ ನಿಗದಿ ಮಾಡಲಾಗಿದೆ. ನಮ್ಮ ನೀರು ನಮ್ಮ ಹಕ್ಕು. ಆಂಧ್ರ ಹಾಗೂ ಮಹಾರಾಷ್ಟ್ರದವರು ಯೋಜನೆ ಅನುಷ್ಠಾನಕ್ಕೆ ಅಡ್ಡಗಾಲು ಹಾಕಿದ್ದಾರೆ ಎಂದು ಹೇಳಿದರು.

ಈ ರಾಜ್ಯದ ರೈತರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಜನಸಾಮಾನ್ಯರ ಪರವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಅವರ ಜೀವನಕ್ಕೆ ನೆರವಾಗಿದೆ. ಐದು ಗ್ಯಾರಂಟಿ ಯೋಜನೆಗಳು ಬದುಕನ್ನು ಹಸನಾಗಿಸಿದೆ. 20 ಸಾವಿರ ಕೋಟಿಯನ್ನ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಬಳಸುತ್ತಿದ್ದೇವೆ ಎಂದರು.

ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಏರಿಕೆ ಮಾಡಿದೆ. ಇದರ ಬಗ್ಗೆ ಒಬ್ಬನೇ ಒಬ್ಬ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ತಿಳಿಸಿದರು.

TAGGED:congressDK ShivakumarKalaburagiPriyank Khargeಕಲಬುರಗಿಕಾಂಗ್ರೆಸ್ಡಿಕೆ ಶಿವಕುಮಾರ್ಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
28 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
48 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?