ಗಾಂಧಿನಗರ: ಗುಜರಾತ್‍ನ ಅಮ್ರೇಲಿ ಜಿಲ್ಲೆಯಲ್ಲಿ ಸೇಡು ತೀರಿಸಿಕೊಳ್ಳುವ ಸಲುವಾಗಿ ಇಬ್ಬರು ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ತಂದೆ, ಮಗನ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ 27 ಮತ್ತು 37 ವರ್ಷದ ಇಬ್ಬರು ಮಹಿಳೆಯರು ಆಸ್ಪತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಮ್ರೇಲಿಯ ಸಾವರಕುಂಡ್ಲಾ ಪಟ್ಟಣದಲ್ಲಿ ಇಬ್ಬರು ವ್ಯಕ್ತಿಗಳು ಆ್ಯಸಿಡ್ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: 99 ವರ್ಷದ ವೃದ್ಧೆಯನ್ನೂ ಬಿಡದ ಪಾಪಿ – ಹಿಡನ್ ಕ್ಯಾಮೆರಾದಲ್ಲಿ ಕ್ರೌರ್ಯ ಸೆರೆ!
ಆ್ಯಸಿಡ್ ದಾಳಿ ನಂತರ ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಪೊಲೀಸರು ಅವರ ಹೇಳಿಕೆಗಳನ್ನು ಪಡೆದಿದ್ದಾರೆ. ಬಳಿಕ ಆರೋಪಿಗಳು ತಮ್ಮ ನೆರೆಹೊರೆಯಲ್ಲಿ ವಾಸಿಸುವವರು ಎಂದು ಸಂತ್ರಸ್ತೆಯರು ತಿಳಿಸಿದ ಬಳಿಕ ತಂದೆ-ಮಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಕುರಿತಂತೆ ಮಾತನಾಡಿದ ಪೊಲೀಸರು, ಈ ಕೃತ್ಯವನ್ನು ಸೇಡು ತೀರಿಸಿಕೊಳ್ಳುವ ಸಲುವಾಗಿ ಎಸಲಾಗಿದೆ. 2021ರಲ್ಲಿ ಸಾವರಕುಂಡ್ಲಾ ಪಟ್ಟಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿ ವಿರುದ್ಧ ಮಹಿಳೆ ಎಫ್‍ಐಆರ್ ದಾಖಲಿಸಿದ್ದರು. ಹೀಗಾಗಿ ಅತ್ತೆ ಹಾಗೂ ಸೊಸೆಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಂದೆ ಎನ್ನುವುದನ್ನು ನೋಡದೆ ಕೇವಲ 900 ರೂ. ಆಸೆಗೆ ಕೊಂದೇ ಬಿಟ್ಟ!
ಇದೀಗ ಸಂತ್ರಸ್ತೆಯರ ದೂರಿನ ಆಧಾರದ ಮೇಲೆ ತಂದೆ-ಮಗನ ವಿರುದ್ಧ ಐಪಿಸಿ ಸೆಕ್ಷನ್ 328ಎ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ. ಸದ್ಯ ಇಬ್ಬರು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಮತ್ತು ಈ ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.