ಮಂಗಳೂರು: ನಗರದ ಬಲ್ಮಠ (Balmata, Mangaluru) ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಚಂದನ್ ಕುಮಾರ್ (30) ಮತ್ತು ರಾಜಕುಮಾರ್ (18) ಮಣ್ಣಿನಡಿ ಸಿಲುಕಿರುವ ಕಾರ್ಮಿಕರು. ಘಟನಾ ಸ್ಥಳದ ಬಳಿ ಸಹ ಕಾರ್ಮಿಕರು ಅಳುತ್ತಿದ್ದಾರೆ. ಘಟನೆಯಲ್ಲಿ ಓರ್ವ ಕಾರ್ಮಿಕ ರಾಜ್ ಕುಮಾರ್ ಅವರನ್ನು ರಕ್ಷಣಾ ತಂಡ ಮೇಲಕೆತ್ತಿದೆ. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದೆ.
ಮಣ್ಣಿನ ಅಡಿಯಲ್ಲಿ ಸಿಲುಕಿರುವ ಮತ್ತೋರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕ್ರೇನ್ ಮೂಲಕ ಜೆಸಿಬಿಯನ್ನು ಕೆಳಗಿಸುವ ಕಾರ್ಯ ಆರಂಭವಾಗಿದೆ. ಘಟನಾ ಸ್ಥಳಕ್ಕೆ ಎನ್‍ಡಿಆರ್‍ಎಫ್ ತಂಡ ಭೇಟಿ ಕೊಟ್ಟಿದೆ.
ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ಕಾರ್ಮಿಕನ ರಕ್ಷಣಾ ತಂಡ ಪತ್ತೆಹಚ್ಚಿದೆ. ನಿರಂತರವಾಗಿ ಮಣ್ಣು ತೆಗೆಯುತ್ತಿರುವ ರಕ್ಷಣಾ ತಂಡದ ಸಿಬ್ಬಂದಿ ಮಣ್ಣಿನಡಿ ಸಿಲುಕಿರುವ ಕಾರ್ಮಿಕನಿಗೆ ಕಾಂಕ್ರಿಟ್ ಕೊರೆದು ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಚಂದನ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ನೇತೃತ್ವದಲ್ಲಿ ಕಾರ್ಮಿಕನ ಆರೋಗ್ಯ ತಪಾಸಣೆ ನಡೆಯುತ್ತಿದೆ. ಇದನ್ನೂ ಓದಿ: ಪೊಲೀಸರ ಹತ್ಯಾಕಾಂಡ ಪ್ರಕರಣ – 9 ವರ್ಷಗಳ ಬಳಿಕ ನಕ್ಸಲ್ ಕೋಮುಲು ಅರೆಸ್ಟ್