ಚೆನ್ನೈ: ಬೋರ್‌ವೆಲ್‌ನಲ್ಲಿ ಬಿದ್ದು ಕಳೆದ ನಾಲ್ಕು ದಿನಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕ ಸುಜಿತ್(2) ಇನ್ನಿಲ್ಲ. ಕಾರ್ಯಾಚರಣೆ ವಿಫಲವಾಗಿದ್ದು ಬಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಬೋರ್‌ವೆಲ್‌ಗೆ ಶುಕ್ರವಾರ ಸಂಜೆ ಸುಜಿತ್ ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು. ಕಳೆದ ನಾಲ್ಕು ದಿನಗಳಿಂದ ಸುಜಿತ್ ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವ ಉಳಿಸಲು ಆಗಲಿಲ್ಲ. ಜಿಲ್ಲಾಡಳಿತ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ.
Advertisement
Tiruchirappalli: Body 2-year-old Sujith Wilson who fell into a borewell in Nadukattupatti on 25th October is being taken to Government Hospital in Manapparai. #TamilNadu pic.twitter.com/vnLUAxf1Br
— ANI (@ANI) October 28, 2019
Advertisement
ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಸದ್ಯಕ್ಕೆ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಗಿದೆ. ಬಾಲಕನ ಮೃತದೇಹ ಹೆರತೆಗೆಯಲಾಗಿದ್ದು, ಅದನ್ನು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
Advertisement
Tiruchirappalli: Body of 2-year-old #SujithWilson who lost his life after he fell into a borewell on October 25 is being taken to his residence in Nadukattupatti following an autopsy. #TamilNadu https://t.co/bQCGGbc44b pic.twitter.com/q1maWKHOdq
— ANI (@ANI) October 29, 2019