ಚಿಕ್ಕಬಳ್ಳಾಪುರ: ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಮಗುವಿನ (Child) ಮೃತದೇಹ ಪತ್ತೆಯಾಗಿದೆ. ಅನುಮಾಮಾಸ್ಪದವಾಗಿ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರೇಚನಾಯ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜಶೇಖರ ರೆಡ್ಡಿ ಹಾಗೂ ಕನ್ಯಾಕುಮಾರಿ ದಂಪತಿಯ 2 ವರ್ಷದ ಮಗು ಲಲಿತ ರೆಡ್ಡಿ ಮೃತ ದುರ್ದೈವಿ. ಮಗುವಿನ ತಾಯಿ ಕನ್ಯಾಕುಮಾರಿ ಹಾಗೂ ಅವರ ಅತ್ತೆ-ಮಾವನ ನಡುವೆ ಕೌಟುಂಬಿಕ ಕಲಹವಿದ್ದು, ಪೊಲೀಸ್ ಠಾಣೆಯಲ್ಲಿ ದೂರು ಸಹ ಕೊಡಲಾಗಿತ್ತು. ಹಲವು ಬಾರಿ ಆದರೂ ಅತ್ತೆ, ಸೊಸೆ, ಮಾವನ ನಡುವೆ ಅಷ್ಟಕ್ಕಷ್ಟೇ ಮಾತು ಇತ್ತು ಎನ್ನಲಾಗಿದೆ.
Advertisement
Advertisement
ಹೀಗಿದ್ದಾಗ ತಾಯಿ ಮಗುವನ್ನು ಮನೆಯಲ್ಲಿ ಅತ್ತೆ-ಮಾವನ ಜೊತೆ ಬಿಟ್ಟು ಜಮೀನಿನ ಬಳಿ ತೆರಳಿದ್ದಾಗ ಮನೆಯಲ್ಲಿದ್ದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ನೀರಿನ ತೊಟ್ಟಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಶಾಲಾ ಆವರಣದಲ್ಲಿ ವಾಮಾಚಾರ- ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ
Advertisement
Advertisement
ಮಧ್ಯಾಹ್ನ ಜಮೀನಿನ ಬಳಿ ಇದ್ದ ಮಗುವನ್ನು ತಾತ ಸೋಮಶೇಖರ್ ರೆಡ್ಡಿ ಲಾಲಿಪಾಪ್ ಕೊಡಿಸೋದಾಗಿ ಹೇಳಿ ಕರೆದುಕೊಂಡು ಹೋಗಿದ್ದ. ಇಷ್ಟು ದಿನ ಮಗುವನ್ನು ಮಾತನಾಡಿಸದ ತಾತ 3 ದಿನಗಳಿಂದ ಮಗುವಿಗೆ ಚಾಕ್ಲೇಟ್ ಕೊಡಿಸಿ ಬಹಳ ಪ್ರೀತಿಯಿಂದ ಮಾತನಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ತಾತನೇ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಸಂಶಯ ಪೋಷಕರದ್ದಾಗಿದೆ. ಈ ಬಗ್ಗೆ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ
Web Stories