-ಬಿಜೆಪಿಯಿಂದ ವೈಫಲ್ಯಗಳ ಚಾರ್ಜ್‌ಶೀಟ್ ಬಿಡುಗಡೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ (CM Siddaramaiah) `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ತಿಳಿಸಿದ್ದಾರೆ.
ಬಿಜೆಪಿ ನಗರ ಕಾರ್ಯಾಲಯ ಬಾವುರಾವ್ ದೇಶಪಾಂಡೆ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಾಲ ಪಡೆದು ಸಂಬಳ ಕೊಡುವಂಥ ಸ್ಥಿತಿ ಬಂದಿದೆ. ನಮ್ಮ ಡಿ.ಕೆ.ಶಿವಕುಮಾರಣ್ಣ ನಿನ್ನೆ ಇದನ್ನು ಸರಿಯಾಗಿ ಹೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಹಣ ಕೊಡಲು ನಿಮ್ಮಪ್ಪನ ಮನೆ ಗಂಟಾ ಎಂದು ಕೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಫಟಾಫಟ್ ಹಣ ಕೊಡುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಇಲ್ಲಿ ಶಿವಕುಮಾರ್ ಕಟಾಕಟ್, ಯಾವಾಗ ಹಣ ಬರುತ್ತೋ ಆಗ ದುಡ್ಡು ಕೊಡುವುದಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.ಇದನ್ನೂ ಓದಿ: ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
ಯಾವ ಸಾಧನೆಗೆ ಈ ಸಂಭ್ರಮಾಚರಣೆ?
ಮುಖ್ಯಮಂತ್ರಿಗಳೇ.. ಯಾವ ಸಾಧನೆಗಾಗಿ ಈ 2 ವರ್ಷದ ಸಂಭ್ರಮಾಚರಣೆ ಮಾಡಿದ್ದೀರಿ? ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರು. ಹಾಲಿನ ದರ ಏರಿಸಿದ್ದೀರಿ. ನೀರು, ವಿದ್ಯುತ್, ಪೆಟ್ರೋಲ್, ಡೀಸೆಲ್, ಆಸ್ತಿ ತೆರಿಗೆ ಇವೆಲ್ಲವನ್ನೂ ಏರಿಸಿದ್ದೀರಿ. ದರ ಏರಿಸಿದ ಪರಿಣಾಮವಾಗಿ ಜನರು ಕಷ್ಟದಲ್ಲಿರುವಾಗ, ಸಮಾವೇಶ ಮಾಡಬೇಕೆಂದು ನಿಮಗೆ ಯಾಕೆ ಅನ್ನಿಸಿದೆ? ಎಂಬ ಪ್ರಶ್ನೆಯನ್ನು ಮುಂದಿಟ್ಟರು.
ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಇಂದು ಬಾವುರಾವ್ ದೇಶಪಾಂಡೆ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಚಾರ್ಜ್‌ಶೀಟ್ʼ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ @drashwathcn , ಮಾಜಿ ಸಚಿವರಾದ ಶ್ರೀ @GopalaiahK , ಶಾಸಕರಾದ ಶ್ರೀ… pic.twitter.com/cBhpZCqEG3
— BJP Karnataka (@BJP4Karnataka) May 21, 2025
ರೈತರ ಆತ್ಮಹತ್ಯೆ, ಬಾಣಂತಿಯರ ಸಾವಿಗಾಗಿ ಸಮಾವೇಶವೇ?
ಎರಡು ವರ್ಷಗಳಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 187 ಕೋಟಿ ರೂ.ಯನ್ನು ಫಟಾಫಟ್ ಲೂಟಿ ಮಾಡಿದ್ದೀರಿ. ಇನ್ನೊಂದೆಡೆ 89 ಕೋಟಿ ರೂ. ಲೂಟಿ ಆಗಿರುವುದಾಗಿ ಸಿದ್ದರಾಮಯ್ಯನವರೇ ಅಧಿವೇಶನದಲ್ಲಿ ಹೇಳಿದ್ದಾರೆ. ಅದಕ್ಕಾಗಿ ಈ ಸಂಭ್ರಮವೇ? ಮುಡಾ ಹಗರಣದಲ್ಲಿ ವಾಸ್ತು ಪ್ರಕಾರ ಇರುವ 14 ಮೂಲೆ ನಿವೇಶನಗಳನ್ನು ಲೂಟಿ ಹೊಡೆದಿದ್ದಕ್ಕೆ ನಿಮ್ಮ ಈ ಸಂಭ್ರಮಾಚರಣೆಯೇ? ಎಂದು ಕೇಳಿದರು.
ಕಳಪೆ ದ್ರಾವಣ ನೀಡಿ ದಿನನಿತ್ಯ 15-20 ಬಾಣಂತಿಯರ ಸಾವಾಗಿದೆಯಲ್ಲವೇ? ಸಚಿವರೇ, ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಹೋದರೆ ವಾಪಸ್ ಬರುವುದೇ ಇಲ್ಲವೆಂಬ ಗ್ಯಾರಂಟಿಗಾಗಿ ಈ ಸಾಧನೆಯೇ? ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಹಾರ ಬರುವುದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ನಿಮ್ಮ ಸಚಿವರು ಹೇಳಿದ್ದಾರೆ. ಬರಗಾಲ ಬರಲೆಂದು ರೈತರು ಕೇಳಿಕೊಳ್ಳುತ್ತಾರೆಂದು ಇನ್ನೊಬ್ಬ ಸಚಿವ ಶಿವಾನಂದ ಪಾಟೀಲರು ಹೇಳಿದ್ದಾರೆ. ಈ ಸಾಧನೆಗಾಗಿ ಸಮಾವೇಶವೇ? ವಕ್ಫ್ ಮಂಡಳಿ ಹೆಸರಿನಲ್ಲಿ ಸಾಬರು ಲಕ್ಷಾಂತರ ಎಕರೆ ರೈತರ ಜಮೀನು, ದೇವಸ್ಥಾನದ ಆಸ್ತಿಯನ್ನು ಲೂಟಿ ಹೊಡೆದರಲ್ಲವೇ? ಅವರಿಗೆಲ್ಲ ಇದೇ ಜಮೀರ್ ಅಹ್ಮದ್ ಕೃಪಾಶೀರ್ವಾದ ಮಾಡಿದ್ದರಲ್ಲವೇ? ವಕ್ಫ್ ಆಸ್ತಿ ವಾಪಸ್ ಕೊಡಿಸುವುದಾಗಿ ಹೇಳಿಕೆ ಕೊಟ್ಟರಲ್ಲವೇ? ಇದಕ್ಕಾಗಿ ನಿಮ್ಮ ಸಾಧನಾ ಸಮಾವೇಶ ಮಾಡುತ್ತಿದ್ದೀರಾ? ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ತಯಾರು ಮಾಡಲು ಯೋಗ್ಯತೆ ಇಲ್ಲದ ಸರ್ಕಾರ ಇದು. ಕನ್ನಡ ಅನುವಾದದಲ್ಲಿ 79 ತಪ್ಪು ಮಾಡಿದ್ದಾರೆ. 2 ಲಕ್ಷ ಅಭ್ಯರ್ಥಿಗಳು ಇದ್ದರು. ಅವರ ಮನೆ, ಜೀವನ ಹಾಳು ಮಾಡಿದ್ದೀರಲ್ಲವೇ? ಅವರ ಬಾಳಿಗೆ ಕೊಡಲಿ ಇಟ್ಟಿದ್ದಕ್ಕೆ ಈ ಸಾಧನಾ ಸಮಾವೇಶ ಮಾಡುತ್ತೀರಾ? ಎಂದು ಕೇಳಿದರು.ಇದನ್ನೂ ಓದಿ: ಕಾಂಗ್ರೆಸ್‌ನವರ ಹೃದಯ ಬಗೆದ್ರೆ ರಾಹುಲ್ ಗಾಂಧಿ, ಪಾಕ್ ಪ್ರಧಾನಿ ಬಿರಿಯಾನಿ ತಿನ್ನೋದು ಕಾಣುತ್ತೆ: ಬಿ.ಸಿ ಪಾಟೀಲ್ ವ್ಯಂಗ್ಯ
ಗಣೇಶ ವಿಗ್ರಹಕ್ಕೆ ಜೈಲುವಾಸ, ಪಾಕ್ ಜಿಂದಾಬಾದ್ ಹೇಳಿದ್ದಕ್ಕಾಗಿ ಸಂಭ್ರಮವೇ?
ಹುಬ್ಬಳ್ಳಿಯಲ್ಲಿ ನೇಹಾ ಲವ್ ಜಿಹಾದ್ ಕೊಲೆ ಆಯಿತು. ಇದಕ್ಕಾಗಿ ಸಂಭ್ರಮಾಚರಣೆಯೇ? ನಾಗಮಂಗಲದಲ್ಲಿ ಪೊಲೀಸ್ ವ್ಯಾನಿನಲ್ಲೇ ಗಣೇಶನ ವಿಗ್ರಹದ ಮೆರವಣಿಗೆ ನಡೆಸಿ ವಿಸರ್ಜಿಸಿದ್ದೀರಿ. ಗಣೇಶನಿಗೂ ಜೈಲುವಾಸ ಮಾಡಿದ್ದೀರಿ. ಇದಕ್ಕೋಸ್ಕರ ಈ ಸಮಾವೇಶವೇ? ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದಿದ್ದೀರಿ. ಪಾಕಿಸ್ತಾನ ಜಿಂದಾಬಾದ್ ಎಂದರೆ, ನಸೀರ್ ಸಾಬ್ ಜಿಂದಾಬಾದ್ ಹೇಳಿಕೆ ಕೊಟ್ಟಿರಿ. ಫೊರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದದ್ದು ಸಾಬೀತಾಗಿದೆ. ನಿಮಗೆ ಮಾನ ಮರ್ಯಾದೆ ಇದೆಯೇ ಕಾಂಗ್ರೆಸ್ಸಿಗರೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
ಮಳೆಯಿಂದ 5 ಜನ ಮೃತಪಟ್ಟಿದ್ದಾರೆ. ಈ ಸಾವಿನ ಮೇಲೆ ಸಮಾವೇಶ ಮಾಡಿದ್ದೀರಿ. ಬೆಂಗಳೂರಿನ ಜನರು ಕರ್ನಾಟಕ ಬಜೆಟ್‌ನ ಶೇ. 67ರಷ್ಟು ತೆರಿಗೆ ಕಟ್ಟುತ್ತಾರೆ. ಅಂಥವರನ್ನು ನೀರಿನಲ್ಲಿ ಮುಳುಗಿಸಿದ್ದೀರಿ. ಬೆಂಗಳೂರನ್ನು ತೇಲುವ ಹಾಗೇ ಮಾಡಿದ್ದೀರಲ್ಲವೇ? ಇದಕ್ಕಾಗಿ ನಿಮ್ಮ ಸಮಾವೇಶ ಮಾಡಿದ್ದೀರಾ ಎಂದರು.
ಹೆಚ್ಚು ಬಾರ್, ವೈನ್ ಸ್ಟೋರ್ ತೆರೆದಿದ್ದಕ್ಕೆ ಅಭಿನಂದನೆ:
ಹಾಲಿನ ದರ 3 ಬಾರಿ 9 ರೂ. ಹೆಚ್ಚಿಸಿ ರೈತರಿಗೆ ಎಷ್ಟು ಪೈಸೆ ಕೊಟ್ಟಿದ್ದೀರಿ? ರೈತರ ಸಬ್ಸಿಡಿ ಇನ್ನೂ ಕೊಟ್ಟಿಲ್ಲ. ಕರ್ನಾಟಕದಲ್ಲಿ ಹೆಚ್ಚು ಬಾರ್‌ಗಳು, ವೈನ್ ಸ್ಟೋರ್ ತೆರೆದಿದ್ದೀರಿ. ಅದಕ್ಕಾಗಿ ವಿಪಕ್ಷವಾದ ನಮ್ಮಿಂದ ನಿಮಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದರು. ಬಾರ್, ವೈನ್ ಸ್ಟೋರ್‌ಗೆ ಹಳ್ಳಿಯಲ್ಲಿ 2 ಕೋಟಿ ರೂ., ನಗರದಲ್ಲಿ 3 ಕೋಟಿ ರೂ. ದರ ನಿಗದಿ ಮಾಡಿದ್ದಾರೆ ಎಂದು ಟೀಕಿಸಿದರು.
ತಂದೆ, ತಾಯಿಯ ಆಸೆಗೆ ಕೊಳ್ಳಿ ಇಟ್ಟಿದ್ದೀರಲ್ಲವೇ?
ಚಾಮರಾಜನಗರ, ಮಂಡ್ಯ, ರಾಯಚೂರು ಸೇರಿ 9 ವಿಶ್ವವಿದ್ಯಾಲಯಗಳನ್ನು ಯಾಕೆ ಮುಚ್ಚಿದ್ದೀರಿ? ಅದಕ್ಕೆ ಕೇವಲ 250 ಕೋಟಿ ರೂ. ಬೇಕಾಗಿತ್ತು. ನಿಮಗೆ ಬಾರ್, ವೈನ್ ಸ್ಟೋರ್‌ಗಳಿಂದ ಬರುವ ಹಣದ ಶೇ. 10ರಷ್ಟನ್ನು ಹಾಕಿದ್ದರೆ ಬಡ ವಿದ್ಯಾರ್ಥಿಗಳ ಆಸೆ ಈಡೇರಿಸಬಹುದಿತ್ತು. ಮಗ, ಮಗಳು ವಿದ್ಯಾವಂತರಾಗುವ ತಂದೆ, ತಾಯಿಯ ಆಸೆಗೆ ಕೊಳ್ಳಿ ಇಟ್ಟಿದ್ದೀರಲ್ಲವೇ? ಎಂದು ಕೇಳಿದರು.
ರಾಜ್ಯದ 40 ಸರ್ಕಾರಿ ಸಂಸ್ಥೆಗಳ ದಿವಾಳಿ:
ರಾಜ್ಯದ 40 ಸರ್ಕಾರಿ ಸಂಸ್ಥೆಗಳು ದಿವಾಳಿ ಆಗಿವೆ. ಸಾರ್ವಜನಿಕ ವಲಯದ 127 ಉದ್ಯಮಗಳಲ್ಲಿ 60 ಉದ್ಯಮಗಳು ನಷ್ಟದಲ್ಲಿವೆ. ಈ ಕಂಪನಿಗಳು 46,800 ಕೋಟಿ ರೂ. ಸಾಲ ಮಾಡಿವೆ. ಪ್ರವಾಸೋದ್ಯಮ, ರಾಜೀವ್ ಗಾಂಧಿ ವಸತಿ ನಿಗಮ, ಮೈಸೂರು ಪೇಪರ್ ಮಿಲ್ಸ್, KSRTC, NWKSRTC, BMTC, BESCOM ಮುಚ್ಚುವ ಸ್ಥಿತಿಯಲ್ಲಿದೆ ಎಂದು ಸಿಎಜಿ ವರದಿಯನ್ನು ಉಲ್ಲೇಖಿಸಿ ತಿಳಿಸಿದರು.ಇದನ್ನೂ ಓದಿ: ಕ್ಯಾಬ್ ಸೇವೆಗೆ ಮುನ್ನ ಟಿಪ್ಸ್ ಪಡೆದರೆ ಕಟ್ಟುನಿಟ್ಟಿನ ಕ್ರಮ: ಪ್ರಹ್ಲಾದ್ ಜೋಶಿ ಎಚ್ಚರಿಕೆ