– ಯಾದಗಿರಿ ಜಿಲ್ಲೆಯ ಬಾಲ ಕಾರ್ಮಿಕ ಯೋಜನಾಧಿಕಾರಿ ಖಡಕ್ ಎಚ್ಚರಿಕೆ
ಯಾದಗಿರಿ: ಪಟಾಕಿ ಮಾರಾಟ ಮಳಿಗೆಗಳಲ್ಲಿ (Fire Crackers Shops) ಕೆಲಸಕ್ಕೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ನೇಮಿಸಿಕೊಂಡರೆ ಅಂತಹ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ (Yadgir) ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ (Child Labor Project Society) ವತಿಯಿಂದ ಜಿಲ್ಲೆಯ ಪಟಾಕಿ ಅಂಗಡಿಗಳಿಗೆ ತೆರಳಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು. ನಗರದ ಪಟಾಕಿ ಮಾರುವ ಮಳಿಗೆಗಳಿಗೆ ತೆರಳಿ, ಪಟಾಕಿ ಮಾರುವ ಪ್ರಕ್ರಿಯೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಕರಪತ್ರದಲ್ಲಿ ಬರೆದು ಹಂಚಲಾಯಿತು. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಶೂ ಬದಲು ಚಪ್ಪಲಿ ಭಾಗ್ಯ – ದ್ವಂದ್ವ ನಿಲುವಿನ ಆದೇಶದಿಂದ ಹಠ ಹಿಡಿದ ಮಕ್ಕಳು
Advertisement
Advertisement
ಈ ವೇಳೆ ಅವರು ಮಾತನಾಡುತ್ತಾ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಅಂತಹ ಮಾಲೀಕರ ವಿರುದ್ಧ 20,000 ರಿಂದ 50,000 ರೂ.ಗಳ ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಎರಡನ್ನೂ ವಿಧಿಸಲಾಗುವುದು ಖಡಕ್ ಸೂಚನೆ ನೀಡಿದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗಬೇಕು ಅಂತ ಸಚಿವರಿಗೆ ಹೈಕಮಾಂಡ್ ಹೇಳಿಲ್ಲ: ಸತೀಶ್ ಜಾರಕಿಹೊಳಿ
Advertisement
Advertisement
ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕಾಯ್ದೆ ಅನ್ವಯ ಬಾಲಕಾರ್ಮಿಕ ಪದ್ಧತಿ ಕಾನೂನು ಪ್ರಕಾರ ಅಪರಾಧವಾಗುತ್ತದೆ. ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಮೀರಿಯೂ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಅಂತಹ ಮಾಲೀಕರ ವಿರುದ್ಧ 20,000 ರಿಂದ 50,000 ರೂ.ಗಳ ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅವಳಿ ಮಕ್ಕಳ ಜೊತೆ ಅಮೂಲ್ಯ ದೀಪಾವಳಿ ಸೆಲೆಬ್ರೇಶನ್