ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ಕಳೆದ ಶುಕ್ರವಾರ ಮಧ್ಯಾಹ್ನ ನಡೆದ ಡಬಲ್ ಮರ್ಡರ್ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡಿ ಹಾರಿಸಿದ್ದಾರೆ.
Advertisement
ಮುಂಜಾನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಕ್ರಾಸ್ ಬಳಿ ಪ್ರಕರಣದ ಎ1 ಆರೋಪಿ ವಿನಯ್ ಹಾಗೂ ತ್ರಿಮೂರ್ತಿ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಪಿಐ ಹರೀಶ್, ಆರೋಪಿತರ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದಿರುವ ಆರೋಪಿಗಳು ಇಬ್ಬರನ್ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದೆ. ಇದನ್ನೂ ಓದಿ: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್ ಮಾಡಿದ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR
Advertisement
Advertisement
ಅಂದಹಾಗೆ ದೊಡ್ಡಬೆಳವಂಗಲ ಗ್ರಾಮದಲ್ಲಿ ಬಿಜೆಪಿ ಮುಖಂಡ ಆಯೋಜನೆ ಮಾಡಿದ್ದ ಕ್ರಿಕೆಟ್ ಟೂರ್ನಿ ವೇಳೆ ಕಾರು ಗ್ರೌಂಡ್‌ಗೆ ತೆಗೆದುಕೊಂಡು ಹೋಗಿದ್ದ ಕೊಲೆ ಆರೋಪಿ ವಿನಯ್ ಕಿರಿಕ್ ಮಾಡಿ ಗಲಾಟೆ ಮಾಡಿಕೊಂಡಿದ್ದ. ತದನಂತರ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಸಿಕ್ಕ ಸಿಕ್ಕವರ ಮೇಲೆ ಹಾಡಹಗಲೇ ಅಟ್ಯಾಕ್ ಮಾಡಿ ಬರ್ಬರವಾಗಿ ಭರತ್ ಹಾಗೂ ಪ್ರತೀಕ್ ಇಬ್ಬರನ್ನ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಪ್ರಕರಣ ರಾಜಕೀಯ ಬಣ್ಣ ಸಹ ಪಡೆದುಕೊಂಡಿತ್ತು.
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k